Home » Karnataka: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

Karnataka: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

0 comments
Mangaluru

Karnataka: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಯುಜಿಸಿ ಅನುಮೋದಿತ ಹಾಗೂ ನ್ಯಾಕ್ ಎ+ ಮಾನ್ಯತೆಯೊಂದಿಗೆ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅ. 15ರೊಳಗೆ ಅರ್ಜಿ ಸಲ್ಲಿಸಬೇಕು.

ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಬಿಎ, ಬಿ.ಕಾಂ, ಬಿಎಸ್ಸಿ, ಬಿಬಿಎ, ಬಿಸಿಎ, ಬಿಎಸ್‌ಡಬ್ಲ್ಯೂ, ಬಿ.ಲಿಬ್ ಐಎಸ್ಸಿ, ಎಂಎ, ಎಂ,ಕಾಂ, ಎಂಬಿಎ, ಎಂಸಿಎ, ಎಂಎಸ್ಸಿ, ಎಂಎಸ್‌ಡಬ್ಲ್ಯೂ, ಎಂ.ಲಿಬ್ ಐಎಸ್‌ಸಿ, ಪಿ.ಜಿ. ಸರ್ಟಿಫಿಕೇಟ್ ಪ್ರೊಗ್ರಾಮ್, ಡಿಪ್ಲೊಮಾ ಪ್ರೊಗ್ರಾಮ್ ಮತ್ತು ಸರ್ಟಿಫಿಕೇಟ್ ಪ್ರೊಗ್ರಾಮ್‌ಗಳಿಗೆ ಪ್ರವೇಶ ಪ್ರಾರಂಭವಾಗಿದೆ.

ಅಭ್ಯರ್ಥಿಗಳು ವಿವಿಯ ವೆಬ್‌ಸೈಟ್ www.ksoumysuru.ac.in ನಲ್ಲಿ ಆನ್‌ಲೈನ್ ಅಡ್ಮಿಷನ್ ಪೋರ್ಟಲ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ವಿವಿಯ ರಾಮನಗರ ಪ್ರಾದೇಶಿಕ ಕೇಂದ್ರಕ್ಕೆ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ. ಶುಲ್ಕದ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ:Petrol Bunk : ಮೀಟರ್ ನಲ್ಲಿ ಝೀರೋ ಇದ್ರೂ ನಿಮ್ಮ ಟ್ಯಾಂಕ್ ಗೆ ಬೀಳುತ್ತೆ ಕಮ್ಮಿ ಪೆಟ್ರೋಲ್ – ಬಂಕ್ ಗಳ ಹೊಸ ವಂಚನೆ ಬಯಲು

ಹೆಚ್ಚಿನ ಮಾಹಿತಿಗೆ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ರಾಮನಗರ ಪ್ರಾದೇಶಿಕ ಕೇಂದ್ರ, ನಂ. 103, ‘ಇ’ ಬ್ಲಾಕ್, ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆ, ಬಿ.ಎಂ.ರಸ್ತೆ, ವಿವೇಕಾನಂದನಗರ, ರಾಮನಗರ-562159. ಮೊಬೈಲ್ ಸಂಖ್ಯೆ:-9448668880, 8861732487, 8618501602, 9743184848 ಹಾಗೂ 9900356226 ಸಂಪರ್ಕಿಸಬೇಕು ಎಂದು ವಿವಿಯ ಪ್ರಾದೇಶಿಕ ನಿರ್ದೇಶಕ ಗಿರೀಶ ಎಚ್.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like