Home » Weather Report: ಕರ್ನಾಟಕ ಹವಾಮಾನ ಮುನ್ಸೂಚನೆ: ಆ.12ರಿಂದ ಒಂದು ವಾರ ಮಳೆ ಹೆಚ್ಚಾಗುವ ಸಾಧ್ಯತೆ

Weather Report: ಕರ್ನಾಟಕ ಹವಾಮಾನ ಮುನ್ಸೂಚನೆ: ಆ.12ರಿಂದ ಒಂದು ವಾರ ಮಳೆ ಹೆಚ್ಚಾಗುವ ಸಾಧ್ಯತೆ

0 comments

Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 12ರಿಂದ ಒಂದು ವಾರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಹಾಸನ ಹಾಗೂ ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 8 ಹಾಗೂ 9ರಂದು ಮಳೆ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ವಿಜಯಪುರ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸ್ವಲ್ಪ ಜಾಸ್ತಿ ಇರಬಹುದು), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಇದನ್ನೂ ಓದಿ: CRPF: ಕಂದಕಕ್ಕೆ ಬಿದ್ದ ಸಿಆರ್‌ಪಿಎಫ್ ವಾಹನ: ಮೂವರು ಹುತಾತ್ಮ, 16 ಮಂದಿಗೆ ಗಾಯ

You may also like