Home » Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ: ತಗ್ಗಿದ ಮುಂಗಾರು: ಯಾವಾಗಿಂದ ಹಿಂಗಾರು ಮಳೆ ಆರಂಭ?

Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ: ತಗ್ಗಿದ ಮುಂಗಾರು: ಯಾವಾಗಿಂದ ಹಿಂಗಾರು ಮಳೆ ಆರಂಭ?

0 comments

Weather Report: ಮುಂಗಾರು ಮಳೆ ದುರ್ಬಲ ಆದರೂ ಅಲ್ಲಲ್ಲಿ ಭಾರೀ ಮಳೆ ಬೀಳುವ ಸೂಚನೆ ದಟ್ಟವಾಗಿ ಕಾಣಿಸುತ್ತಿದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ದಿನಕ್ಕೆ ಒಂದೆರಡು ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು: ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ 18ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.

ಒಳನಾಡು: ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಸೆಪ್ಟೆಂಬರ್ 18ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಮುಂಗಾರು ಉತ್ತರ ಭಾರತದಲ್ಲಿ ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ, ರಾಜ್ಯದಲ್ಲಿ ಅಕ್ಟೊಬರ್ 2ನೇ ವಾರದಲ್ಲಿ ಹಿಂಗಾರು ಆರಂಭವಾಗಬಹುದು ಎನ್ನುವ ಬಲವಾದ ನಿರೀಕ್ಷೆಯಿದೆ.

ಇದನ್ನೂ ಓದಿ:Shahid Afrid Accuses Modi: ಹ್ಯಾಂಡ್‌ಶೇಕ್ ವಿವಾದದ ನಡುವೆ ಶಾಹಿದ್ ಆಫ್ರಿದಿಯಿಂದ ಭಾರತ ವಿರೋಧಿ ಹೇಳಿಕೆ

20 ರಾಜ್ಯಗಳಿಗೆ ಭಾರಿ ಮಳೆಯ ಎಚ್ಚರಿಕೆ, ಪಟ್ಟಿ ಬಿಡುಗಡೆ

ಸೆಪ್ಟೆಂಬರ್ 17ರಂದು 20 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ ಹವಾಮಾನ ಇಲಾಖೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಬಿಹಾರ, ಉತ್ತರ ಪ್ರದೇಶ, ಜಾರ್ಖಂಡ್, ಕರ್ನಾಟಕ, ಗೋವಾ, ಮಹಾರಾಷ್ಟ್ರ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ ಮತ್ತು ತೆಲಂಗಾಣದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

You may also like