Home » Karnataka Rain: ಮುಂದಿನ 3 ದಿನ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ಮಳೆರಾಯ – ಹೈ ಅಲರ್ಟ್ ಘೋಷಣೆ

Karnataka Rain: ಮುಂದಿನ 3 ದಿನ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ಮಳೆರಾಯ – ಹೈ ಅಲರ್ಟ್ ಘೋಷಣೆ

1 comment
Karnataka Rain alert

Karnataka Rain Alert Today : ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮೋಡ ಮುಸುಕಿದ ವಾತಾವರಣದ ಜೊತೆಗೆ ರಾಜ್ಯದ ಕೆಲವೆಡೆ ಮಳೆರಾಯ(Karnataka Rain alert) ದರ್ಶನ ನೀಡಿದ್ದಾನೆ. ಇಂದಿನಿಂದ(Rain Alert Today) ಮುಂದಿನ ಮೂರು ದಿನಗಳವರೆಗೆ ರಾಜ್ಯದ 15 ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೂರು ದಿನಗಳವರೆಗೆ 15 ಜಿಲ್ಲೆಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಗುಡುಗಿನ ಜೊತೆಗೆ ನಿರಂತರ ಮಳೆಯಾಗಲಿದ್ದು, ಬಿರುಗಾಳಿ ಕೂಡ ಇರಲಿರುವ ಕುರಿತು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆ‌ ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡು ದಿನ ಹಾಸನ, ಕೊಡಗು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಅತಿ ಹೆಚ್ಚು ಮಳೆಯಾಗುವ ಸಂಭವದ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವರುಣನ ಅಬ್ಬರ ಜೋರಾಗಿರಲಿದೆ.

ಇದನ್ನೂ ಓದಿ: Yuva Nidhi Yojane: ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ’ ಜಾರಿಗೆ ಮುಹೂರ್ತ ಫಿಕ್ಸ್ – ಈ ದಿನದಿಂದಲೇ ಖಾತೆಗೆ ಹಣ

You may also like

Leave a Comment