Murugha Shree: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ (Sexual Harassment) ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗೆ (Murugha Shree) ಜಾಮೀನು ದೊರೆತಿದೆ ಎನ್ನಲಾಗಿದೆ.
ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ (Hostel)ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ(Sexual Harassment) ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಮುರುಘಾ ಶ್ರೀ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಇದೀಗ ನ್ಯಾಯಾಲಯ ಮುರುಘಾ ಶ್ರೀಗೆ ಜಾಮೀನು ನೀಡಿದೆ. 2022ರ ಸೆಪ್ಟೆಂಬರ್ 1ರಿಂದ ಜೈಲುವಾಸ ಅನುಭವಿಸುತ್ತಿರುವ ಮುರುಘಾ ಶ್ರೀಯ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದ ಹಿನ್ನೆಲೆ ಮುರುಘಾ ಶ್ರೀ ಪರ ವಕೀಲರು ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಲೇರಿದ್ದರು. ಕರ್ನಾಟಕ ಹೈಕೋರ್ಟ್ ಈ ಜಾಮೀನು ಅರ್ಜಿಯ ತೀರ್ಪನ್ನು ಇಂದು ಪ್ರಕಟಿಸಿದ್ದು, ಒಂದು ಪ್ರಕರಣದಲ್ಲಿ ಮಾತ್ರ ಮುರುಘಾ ಶ್ರೀಗೆ ಜಾಮೀನು ದೊರೆತಿದೆ. ಆದಾಗ್ಯೂ, ಅವರಿಗೆ ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗಿದೆ.
ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವ ಕೋರ್ಟ್, ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂದು ಹೇಳುವ ಮೂಲಕ ಚಿತ್ರದುರ್ಗ ಬಿಟ್ಟು ಹೊರ ಹೋಗದಂತೆ ಷರತ್ತುಬದ್ಧ ಜಾಮೀನು ವಿಧಿಸಿದೆ. ಈ ಮೊದಲು ದಾಖಲಾಗಿದ್ದ ಒಂದು ಪ್ರಕರಣದಲ್ಲಿ ಶ್ರೀಗಳಿಗೆ ಜಾಮೀನು ಸಿಕ್ಕಿದ್ದು, ಆದರೆ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ಹಿನ್ನೆಲೆ ಮುರುಘಾ ಶ್ರೀಗಳು ಜೈಲಿನಲ್ಲಿಯೇ ಉಳಿಯಬೇಕಾಗಿದೆ.
ಇದನ್ನು ಓದಿ: Professional Tax: ಈ ರಾಜ್ಯದ ಉದ್ಯೋಗಿಗಳಿಗಷ್ಟೇ ಬೀಳಲಿದೆ ಇನ್ನು ತೆರಿಗೆ – ಯಾಕಾಗಿ? ಇದನ್ನು ಪಾವತಿಸವದು ಹೇಗೆ ?!
