Home » KAS-SSC Pre Exam: UPSC/KAS/SSC ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

KAS-SSC Pre Exam: UPSC/KAS/SSC ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

0 comments
Open Book Exam

KAS-SSC Pre Exam: ಪ್ರಸಕ್ತ (2025-26) ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಯುಪಿಎಸ್‌ಸಿ/ಕೆಎಎಸ್‌ ಗೆಜೆಟೆಡ್‌ ಪ್ರೊಬೆಷನರ್‌ ವಸತಿಯುತ ತರಬೇತಿಯನ್ನು ಬೆಂಗಳೂರಿನ ಹಜ್‌ ಭವನದಲ್ಲಿ ಹಾಗೂ ಕೆಪಿಎಸ್‌ಸಿ ಗ್ರೂಪ್‌ -“ಸಿ”, ಆರ್‌ಆರ್‌ಬಿ ಮತ್ತು ಎಸ್‌ಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದ್ದು, ಈ ತರಬೇತಿಗೆ ಅರ್ಹ ಅಲ್ಪಸಂಖ್ಯತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

https://sevasindhu.karnataka.gov.in/departmentServices ಅಡಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ವಿಧಾನಗಳು https://dom.karnataka.gov.in ನಲ್ಲಿ ಲಭ್ಯವಿದೆ.

ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು, (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ), ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ: ಯುಪಿಎಸ್‌ಸಿ/ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್, ಕೆಪಿಎಸ್ಸಿ ಗ್ರೂಪ್-“ಸಿ” ತರಬೇತಿಗೆ ಕನಿಷ್ಠ 21 ಹಾಗೂ ಗರಿಷ್ಠ 35 ವರ್ಷಗಳು ಮತ್ತು ಆರಆಗ್ನಿ ಮತ್ತು ಎಎಸ್‌ ತರಬೇತಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 30 ವರ್ಷಗಳು ಮೀರಿರಬಾರದು. (ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ), ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಹಿಂದಿನ ಸಾಲಿನಲ್ಲಿ ಐಎಎಸ್/ಕೆಎಎಸ್ ತರಬೇತಿ ಪಡೆದ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಗಸ್ಟ್ 26 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಇವರನ್ನು ಸಂಪರ್ಕಿಸಬಹುದು. ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ.ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆ : 9972799091, ತಾಲ್ಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ: 8548068519, ತಾಲ್ಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂರವಾಣಿ ಸಂಖ್ಯೆ 9900731037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ.

You may also like