

ಬೆಳ್ತಂಗಡಿ: ಕಾಶಿಪಟ್ಟ 24*7 ನೀರು ಪೂರೈಕೆ ಗ್ರಾಮ ಘೋಷಣೆ, ಜಲ ಜೀವನ್ ಮಿಷನ್ ಕಾಮಗಾರಿ ಮತ್ತು ಗ್ರಾಮ ಪಂಚಾಯತ್ ಬಯಲು ಸಭಾಭವನ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘದ ಆವರಣದ ಮೇಲ್ಪಾವಣಿ ಲೋಕಾರ್ಪಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜ.25 ರಂದು ಲೋಕಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣಾಭಿವೃದ್ಧಿ ಜಿಲ್ಲಾ ನಿರ್ದೇಶಕರಾದ ಜಯರಾಂ, ಕುಡಿಯುವ ನೀರು ಅಭಿಯಂತರರು ಜಯಪ್ರಕಾಶ್ ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಪಿ.ಕೆ ರಾಜು ಪೂಜಾರಿ, ಕಾಶಿಪಟ್ಲ ಪಂಚಾಯತ್ ಉಪಾಧ್ಯಕ್ಷ ಶುಭವಿ, ಪಂಚಾಯತ್ ಸದಸ್ಯರಾದ ರವೀಂದ್ರ ಪೂಜಾರಿ, ಸುಶೀಲ, ಆಶೋಕ್ ಕುಮಾರ್, ಶಿಲ್ಪ, ಕಾಶಿಪಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವಸಂತ್ ಉಪಸ್ಥಿತರಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಸನ್ಮಾನಿಸಲಾಯಿತು ಹಾಗೂ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು ಕಾಶಿಪಟ್ಟ ಪಂಚಾಯತ್ ಅಧ್ಯಕ್ಷ ಸತೀಶ್ ಕಾಶಿಪಟ್ಟ ಸ್ವಾಗತಿಸಿ, ಶಿಕ್ಷಕ ದೇವುದಾಸ್ ನಾಯಕ್ ನಿರೂಪಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್ ಧನ್ಯವಾದವಿತ್ತರು.













