ನೆಲ್ಯಾಡಿ: ಕೊಕ್ಕಡ ಗ್ರಾಮದ ಪುತ್ಯ ನಿವಾಸಿ ಮಹಿಳೆಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮತ್ತು ಈ ವಿಚಾರ ತಿಳಿದು ಆಕೆಯ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅ. 18 ರಂದು ಮಧ್ಯಾಹ್ನ ನಡೆದಿದೆ.
ಪುತ್ಯೆ ನಿವಾಸಿ ರಾಜೇಶ್ ಎಂಬವರ ಪತ್ನಿ ರಶ್ಮಿತಾ(28ವ.) ಆತ್ಮಹತ್ಯೆ ಮಾಡಿಕೊಂಡವರು. ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ರಶ್ಮಿತಾರವರು ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿ ತಿಳಿದು ಮನೆಗೆ ಬಂದ ರಶ್ಮಿತಾರವರ ಪತಿ ರಾಜೇಶ್ ಆತ್ಮಹತ್ಯೆಗೆ ಮುಂದಾಗಿದ್ದು ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ. ಧರ್ಮಸ್ಥಳ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.