Home » ಕೊಳ್ತಿಗೆ : ಅನ್ಯಕೋಮಿನ ಯುವಕನ ಮನೆಯಲ್ಲಿ ಹಿಂದು ಯುವತಿ ಇರುವ ಗುಮಾನಿ | ಮನೆ ಮುಂದೆ ಜಮಾಯಿಸಿದ ಸಾರ್ವಜನಿಕರು

ಕೊಳ್ತಿಗೆ : ಅನ್ಯಕೋಮಿನ ಯುವಕನ ಮನೆಯಲ್ಲಿ ಹಿಂದು ಯುವತಿ ಇರುವ ಗುಮಾನಿ | ಮನೆ ಮುಂದೆ ಜಮಾಯಿಸಿದ ಸಾರ್ವಜನಿಕರು

by Praveen Chennavara
0 comments

ಪುತ್ತೂರು : ಅನ್ಯಕೋಮಿನ ಯುವಕನೋರ್ವನ ಮನೆಯಲ್ಲಿ ಹಿಂದೂ ಯುವತಿ ಇದ್ದಾಳೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಯುವಕನ ಮನೆ ಮುಂದೆ ಸಾರ್ವಜನಿಕರು ಜಮಾಯಿಸಿದ ಘಟನೆ ಕೊಳ್ತಿಗೆ ಗ್ರಾಮದ ಕುಂಟಿಕಾನ ಎಂಬಲ್ಲಿ ಸೆ.29 ರಂದು ನಡೆದಿದೆ.

ಸೆ.29 ರಂದು ಅನ್ಯಕೋಮಿನ ಯುವಕನೋರ್ವನ ಮನೆಯಲ್ಲಿ ಹಿಂದೂ ಯುವತಿಯೊಬ್ಬಳು ತಂಗಿದ್ದಾಳೆ ಎನ್ನುವ ಬಗ್ಗೆ ಮಾಹಿತಿ ದೊರೆತ ಸ್ಥಳೀಯರು ಮನೆ ಬಳಿ ತೆರಳಿ ನೋಡಿದಾಗ ಯುವತಿಯೊಬ್ಬಳಿದ್ದಳೆಂದು ಸಾರ್ವಜನಿಕರು ತಿಳಿಸಿದ್ದಾರೆ.

ಈ ಬಗ್ಗೆ ತಿಳಿಯುತ್ತಿದಂತೆ ಅನ್ಯಕೋಮಿನ ಯುವಕನೋರ್ವನ ಮನೆ ಬಳಿ ಸಾರ್ವಜನಿಕರು ದೌಡಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು.

ಈ ಬಗ್ಗೆ ಬೆಳ್ಳಾರೆ ಪೊಲೀಸರಿಗೆ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ಮನೆಗೆ ಆಗಮಿಸಿದಾಗ ಒಂದು ಗಂಟೆಗಳ ಕಾಲ ಬಾಗಿಲು ತೆಗೆಯದೆ, ನಂತರ ಬಾಗಿಲು ತೆಗೆದಿದ್ದು ಮನೆಯೊಳಗೆ ಹುಡುಕಾಡಿದಾಗ ಯುವತಿ ಮನೆಯಲ್ಲಿ ಇಲ್ಲದೆ ಕಾರಣ ಯುವತಿಯನ್ನು ಬೇರೆ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯರು ಅಭಿಪ್ರಾಯಿಸಿದ್ದಾರೆ.ಕೆಲವರ ಪ್ರಕಾರ ಬೆಳಿಗ್ಗೆ ಯುವತಿಯನ್ನು ಕರೆತಂದು ಬಳಿಕ ಬೇರೆ ಕಡೆ ಬಿಟ್ಟು ಬಂದಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಯುವಕ ದೇಲಂಪಾಡಿ ಕಡೆ ಕೆಲಸಕ್ಕೆ ತೆರಳುತ್ತಿದ್ದು, ಈ ಸಂದರ್ಭದಲ್ಲಿ ಯುವತಿಯ ಪರಿಚಯವಾಗಿ ಅವಳನ್ನು ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಮನೆಗೆ ಕರೆ ತಂದಿದ್ದಾನೆ ಎನ್ನಲಾಗಿದೆ.ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳದಲ್ಲಿದ್ದ ಸಾರ್ವಜನಿಕರ ಗುಂಪನ್ನು ಚದುರಿಸಿ, ಅನ್ಯಕೋಮಿನ ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ ಆತನ ಮನೆಯಲ್ಲಿ ಯುವತಿ ಪತ್ತೆಯಾಗದ ಹಿನ್ನೆಲೆಯಲ್ಲಿ ದೂರು ದಾಖಲಾಗಿಲ್ಲ ಎನ್ನಲಾಗಿದೆ.

You may also like

Leave a Comment