Home » Koragajja Movie: ರೀಲ್ಸ್ ಮಾಡಿ ಕೋಟಿ ರೂಪಾಯಿ ಬಹುಮಾನ ಗೆಲ್ಲಿ: ‘ಕೊರಗಜ್ಜ’ ಚಿತ್ರತಂಡದ ಆಫರ್‌ಗೆ ಆಕ್ರೋಶ

Koragajja Movie: ರೀಲ್ಸ್ ಮಾಡಿ ಕೋಟಿ ರೂಪಾಯಿ ಬಹುಮಾನ ಗೆಲ್ಲಿ: ‘ಕೊರಗಜ್ಜ’ ಚಿತ್ರತಂಡದ ಆಫರ್‌ಗೆ ಆಕ್ರೋಶ

0 comments

Koragajja movie: ಸಾಮಾನ್ಯವಾಗಿ ಪ್ರಚಾರಕ್ಕಾಗಿ ಆಫರ್​​ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ (Koragajja Film Team) ಇಂಥಹದ್ದೇ ಆಫರ್ ನೀಡಿದೆ.‘ಕೊರಗಜ್ಜ’ ಸಿನಿಮಾದ (Koragajja Cinema) ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು ಸಹ ಚಿತ್ರತಂಡ ನೀಡಿದೆ.

ಚೆನ್ನಾಗಿ ರೀಲ್ಸ್ ಮಾಡಿ ಹಂಚಿಕೊಂಡು, ಅದರಲ್ಲಿ ಚಿತ್ರತಂಡ ಆಯ್ಕೆ ಮಾಡಿದವರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆಯಂತೆ. ಆದ್ರೆ ಇದಕ್ಕೆ ಕೊಡಗಿನ ದೈವ ನರ್ತಕರಿಂದ ಆಕ್ರೋಶ ವುಕ್ತವಾಗಿದೆ.ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾದ ಹಾಡುಗಳು ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹಾಡುಗಳಿಗೆ ರೀಲ್ಸ್ (Reels) ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು ಚಿತ್ರತಂಡ ನೀಡಿದೆ.

ʻಕಾಂತಾರʼ ಸಿನಿಮಾದಲ್ಲಿ ದೈವ ವಿಡಂಬನೆ ಕುರಿತು ಸಾಕಷ್ಟು ಜನ ದೈವದ ವೇಷಭೂಷಣ ಹಾಕಿಕೊಂಡು ಸಿಕ್ಕಸಿಕ್ಕಲ್ಲಿ ರೀಲ್ಸ್‌ ಮಾಡುತ್ತಾ ದೈವಗಳಿಗೆ ಅಪಮಾನ ಮಾಡಿದ್ದರು. ಇದೀಗ ತುಳುನಾಡಿನ ಆರಾಧ್ಯ ದೈವವಾಗಿರುವ ಕೊರಗಜ್ಜನ ಕುರಿತು ರೀಲ್ಸ್‌ ಮಾಡಿ ಹೆಚ್ಚು ಲೈಕ್ಸ್, ವೀವ್ಸ್‌ ಗಳಿಸಿದವಿಗೆ ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿರುವುದು ಖಂಡನೀಯವಾಗಿದೆ. ಈ ತಪ್ಪು ಮುಂದುವರಿದ್ರೆ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ದೈವದ ಮೊರೆ ಹೋಗುವುದಾಗಿ ಹೇಳಿದ್ದಾರೆ.ಕರಾವಳಿ ಭಾಗದ ಕಾರಣಿಕದ ಶಕ್ತಿಯಾಗಿರುವ ಕೊರಗಜ್ಜ ದೈವದ ಕಥೆ ಆಧರಿತ ಸಿನಿಮಾ ಬಿಡುಗಡೆಗೆ ಸಿದ್ಧಗೊಂಡಿದೆ.

ಚಿತ್ರದ ಪ್ರಚಾರಕ್ಕಾಗಿ ಕೊರಗಜ್ಜ ಚಿತ್ರದಲ್ಲಿರುವ 6 ಹಾಡುಗಳನ್ನು ಪ್ರೇಕ್ಷಕರಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಸಿನಿಮಾದ ಪ್ರಚಾರಕ್ಕಾಗಿ ಕೊರಗಜ್ಜ ರೀಲ್ಸ್ ಎಂಬ ಸ್ಪರ್ಧೆಯನ್ನು ಆಯೋಜಿಸಿದೆ. ಇದನ್ನ ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ತೀವ್ರವಾಗಿ ಖಂಡಿಸಿದೆ. ಕಾನೂನು ಹೋರಾಟಕ್ಕೂ ಮುಂದಾಗುವುದಾಗಿ ದೈವ ನರ್ತಕರ ಸಂಘದ ಪ್ರಮುಖರು ತಿಳಿಸಿದ್ದಾರೆ.

You may also like