Home » ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಪಲ್ಟಿ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಪಲ್ಟಿ

0 comments

ಮಂಗಳವಾರ ಸಂಜೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೋಟ ಶ್ರೀನಿವಾಸ್ ಪೂಜಾರಿಯವರು ಸಿಬ್ಬಂದಿಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಬೆಂಗಾವಲು ವಾಹನದ ಮುಂದೆ ಸಂಚರಿಸುತಿದ್ದ ಲಾರಿ ಸೂಚನೇ ನೀಡದೇ ಪಥ ಬದಲಿಸಿದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು, ಅದೃಷ್ಟವಶಾತ್ ಬೆಂಗಾವಲು ವಾಹನದಲ್ಲಿದ್ದ ಎಲ್ಲಾ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ.

You may also like

Leave a Comment