Home » ಕೆಪಿಸಿಎಲ್‌ ಎಂಜಿನಿಯರ್‌ ಹುದ್ದೆಗಳ ನೇಮಕಾತಿಗೆ ಡಿ.27,28 ರಂದು ಮರುಪರೀಕ್ಷೆ

ಕೆಪಿಸಿಎಲ್‌ ಎಂಜಿನಿಯರ್‌ ಹುದ್ದೆಗಳ ನೇಮಕಾತಿಗೆ ಡಿ.27,28 ರಂದು ಮರುಪರೀಕ್ಷೆ

0 comments

ಕರ್ನಾಟಕ ವಿದ್ಯುತ್‌ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್‌ ಸೇರಿ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂಕೋರ್ಟ್‌ ರದ್ದು ಪಡಿಸಿರುವ ಹಿನ್ನೆಲೆಯಲ್ಲಿ ಹೊಸದಾಗಿ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಿ (ಕೆಇಎ) ಪ್ರಕಟ ಮಾಡಿದೆ.

ಡಿ.27 ಮತ್ತು 28 ರಂದು ಮರು ಪರೀಕ್ಷೆ ನಡೆಸಲಾಗುತ್ತದೆ. ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ನೀಡಿರುವ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗಿತ್ತು ಇತ್ಯಾದಿ ಮಾಹಿತಿಯನ್ನು ನಮೂದಿಸಬೇಕು.

ಹೆಚ್ಚಿನ ವಿವರಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ ನೋಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ತಿಳಿಸಿದ್ದಾರೆ.

You may also like