Home » Krishna Janmashtami: ಶ್ರೀಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ವೇಳೆ ವಿದ್ಯುತ್‌ ದುರಂತ: ಐವರು ಸ್ಥಳದಲ್ಲೇ ಸಾ*ವು

Krishna Janmashtami: ಶ್ರೀಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ವೇಳೆ ವಿದ್ಯುತ್‌ ದುರಂತ: ಐವರು ಸ್ಥಳದಲ್ಲೇ ಸಾ*ವು

0 comments

Krishna Janmashtami: ಕೃಷ್ಣ ಜನ್ಮಾಷ್ಟಮಿಯ ಆಚರಣೆಯಂದು ನಡೆದ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್‌ ತಂತಿ ತಗುಲಿ ಐವರು ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಮೃತರನ್ನು ಕೃಷ್ಣಯಾದವ್‌ (21), ಸುರೇಶ್‌ ಯಾದವ್‌ (34), ಶ್ರೀಕಾಂತ್‌ ರೆಡ್ಡಿ (35), ರುದ್ರ ವಿಕಾಸ್‌ (39) ಮತ್ತು ರಾಜೇಂದ್ರ ರೆಡ್ಡಿ (45) ಎಂದು ಗುರುತಿಸಲಾಗಿದೆ.

ಈ ಘಟನೆ ರಾಮಂತಪುರದ ಗೋಕುಲನಗರದಲ್ಲಿ ತಡರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ಈ ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗೆಂದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯುತ್‌ ಅವಘಡದಿಂದ ಐವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆಂದು ಗಾಂಧಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

You may also like