1
ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ದುರಂತ ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ನಡೆದಿದೆ.
ಮೃತ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು. ಮಂಗಳವಾರ ಮಧ್ಯಾಹ್ನ ಈ ದುರಂತ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಮತ್ತು ಸಾರ್ವಜನಿಕರು ಹರಸಾಹಸಪಟ್ಟರು.
ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಓರ್ವನ ಸ್ಥಿತಿ ಗಂಭೀರವಾಗಿದೆ. ಅಪಘಾತದ ಭೀಕರತೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
