Home » ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಸಿಎಂ ಭೇಟಿ

ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಸಿಎಂ ಭೇಟಿ

by Praveen Chennavara
0 comments

ಮಂಗಳೂರು, ಅ,13(ಕ.ವಾ):- ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಅ.13ರ ಬುಧವಾರ ಮಂಗಳೂರು ನಗರದ ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯಕ್ಕೆ ಭೇಟಿ ನೀಡಿ,  ಅಲ್ಲಿನ ದಸರಾ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಶಶಿಕುಮಾರ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು, ದೇವಾಲಯದ ಪದಾಧಿಕಾರಿಗಳು  ಸೇರಿದಂತೆ ಸಂಬಂಧಿಸಿದವರು ಸ್ಥಳದಲ್ಲಿದ್ದರು.

You may also like

Leave a Comment