Home » ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟ್‌ ಆಟಗಾರ ಕೆ.ಎಲ್. ರಾಹುಲ್ !

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟ್‌ ಆಟಗಾರ ಕೆ.ಎಲ್. ರಾಹುಲ್ !

0 comments

ಸುಬ್ರಹ್ಮಣ್ಯ :  ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ, ತಂಡದ ಉಪನಾಯಕ ಮಂಗಳೂರು ಮೂಲಕ ಕೆ.ಎಲ್. ರಾಹುಲ್ ಇಂದು ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದರ್ಶನ ಪಡೆದರು

ಕೆ.ಎಲ್.ರಾಹುಲ್ ಪ್ರತಿವರ್ಷವೂ ಕುಕ್ಕೆ ಸುಬ್ರಮಣ್ಯಕ್ಕೆ ಆಗಮಿಸಿ, ಪೂಜೆ ಸಲ್ಲಿಸುತ್ತಾರೆ. ಈ ಬಾರಿಯೂ ಆಗಮಿಸಿ ದೇವರಿಗೆ ಮಹಾಪೂಜೆ ನೆರವೇರಿಸುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.

ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ ಅವರು ವಿಶೇಷ ಸೇವೆ, ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಇದೇ ವೇಳೆ ದೇವಳದ ವತಿಯಿಂದ ಕೆ.ಎಲ್. ರಾಹುಲ್ ಅವರನ್ನು ಗೌರವಿಸಲಾಯಿತು

You may also like

Leave a Comment