Home » ಕುಕ್ಕೆ ಸುಬ್ರಹ್ಮಣ್ಯ : ಕಾಣಿಕೆ ಹುಂಡಿಯ ಹಣ ಎಣಿಕೆ ವೇಳೆ ಕಳ್ಳತನ : ಮಹಿಳೆಯ ಬಂಧನ

ಕುಕ್ಕೆ ಸುಬ್ರಹ್ಮಣ್ಯ : ಕಾಣಿಕೆ ಹುಂಡಿಯ ಹಣ ಎಣಿಕೆ ವೇಳೆ ಕಳ್ಳತನ : ಮಹಿಳೆಯ ಬಂಧನ

by Praveen Chennavara
0 comments

ಸುಬ್ರಹ್ಮಣ್ಯ, ಜ. 29. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಕೆಯ ವೇಳೆ ಸಿಬ್ಬಂದಿ ಮಹಿಳೆಯೋರ್ವರು ಹಣ ಕಳ್ಳತನ ಮಾಡಿ ಸಿಕ್ಕಿಬಿದ್ದ ಘಟನೆ ಗುರುವಾರದಂದು ನಡೆದಿದೆ.

ದೇವಸ್ಥಾನದ ಹುಂಡಿ ಎಣಿಕೆ ಮಾಡುತ್ತಿದ್ದ ವೇಳೆ ಬಾಲಕಿ ಎಂಬ ಮಹಿಳೆಯೋರ್ವರು ಹಣವನ್ನು ಕದ್ದು ಬಚ್ಚಿಟ್ಟಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಸೆಕ್ಯುರಿಟಿ ಗಾರ್ಡ್ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಈ ಕುರಿತು ಕುಕ್ಕೆ ಶ್ರೀ ಕ್ಷೇತ್ರದ ಕಾರ್ಯ ನಿರ್ವಹಣಾಧಿಕಾರಿ ನೀಡಿದ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು, ಮಂಗಳೂರಿನ ರಿಮಾಂಡ್ ಹೋಂನಲ್ಲಿ ಇರಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

You may also like

Leave a Comment