11
ಹಾಸ್ಯನಟ ಕುನಾಲ್ ಕಮ್ರಾ ಸಾಮಾಜಿಕ ಮಾಧ್ಯಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅನ್ನು ಅಪಹಾಸ್ಯ ಮಾಡುವ ಟಿ-ಶರ್ಟ್ ಧರಿಸಿರುವ ಛಾಯಾಚಿತ್ರವನ್ನು ಪೋಸ್ಟ್ ಮಾಡುವ ಮೂಲಕ ಮತ್ತೊಮ್ಮೆ ವಿವಾದವನ್ನು ಸೃಷ್ಟಿಸಿದ್ದಾರೆ. ಈ ಪೋಸ್ಟ್‌ಗೆ ಬಿಜೆಪಿಯಿಂದ ಬಲವಾದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಂಗಳವಾರ ಪೊಲೀಸ್ ಕ್ರಮದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಮಹಾರಾಷ್ಟ್ರ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಚಂದ್ರಶೇಖರ್ ಬವಾಂಕುಲೆ ಅವರು, ಆನ್‌ಲೈನ್‌ನಲ್ಲಿ “ಆಕ್ಷೇಪಾರ್ಹ” ವಿಷಯವನ್ನು ಹಂಚಿಕೊಂಡರೆ ಅವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.
“ಇಂತಹ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ” ಎಂದು ಕಮ್ರಾ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದರು.
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಶಿವಸೇನಾ ಕ್ಯಾಬಿನೆಟ್ ಸಚಿವ ಸಂಜಯ್ ಶಿರ್ಸಾತ್, ಹಾಸ್ಯನಟನ ಪೋಸ್ಟ್‌ಗೆ ಆರ್‌ಎಸ್‌ಎಸ್ ದೃಢವಾಗಿ ಪ್ರತಿಕ್ರಿಯಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.
