Home » Police death: ಕುಂದಾಪುರ ಪೊಲೀಸ್‌ ಇನ್‌ಸ್ಪೆಕ್ಟರ್ ನಿಧನ!

Police death: ಕುಂದಾಪುರ ಪೊಲೀಸ್‌ ಇನ್‌ಸ್ಪೆಕ್ಟರ್ ನಿಧನ!

0 comments

Police death: ಕುಂದಾಪುರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್ ನಂಜಪ್ಪ ಎನ್. (59) ಬುಧವಾರ ರಾತ್ರಿ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು ಕಳೆದ ಆಗಸ್ಟ್‌ನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಇನ್‌ಸ್ಪೆಕ್ಟ‌ರ್ ಸೇವೆ ಸಲ್ಲಿಸುತ್ತಿದ್ದರು. ಸೋಮವಾರ ಕರ್ತವ್ಯದಲ್ಲಿದ್ದಾಗ ಅವರಿಗೆ ಅಧಿಕ ರಕ್ತದೊತ್ತಡದಿಂದ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಕಾಲ ಚಿಕಿತ್ಸೆಯ ಹೊರತಾಗಿಯೂ ಅವರ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ. ಮತ್ತು ಬುಧವಾರ ರಾತ್ರಿ ಅವರು ಕೊನೆಯುಸಿರೆಳೆದರು.

You may also like