Home » ಕುವೆಂಪು ಸೊಸೆ, ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ಇನ್ನಿಲ್ಲ

ಕುವೆಂಪು ಸೊಸೆ, ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ಇನ್ನಿಲ್ಲ

by Praveen Chennavara
0 comments

ಮೂಡಿಗೆರೆ : ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84 ವ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನಹೊಂದಿದರು.

ಕಳೆದ ಕೆಲ ದಿನದ ಹಿಂದೆ ಬೆಂಗಳೂರಿನ ಮಗಳ ಮನೆಗೆ ಹೋಗಿದ್ದರು.

ಖ್ಯಾತ ಕವಿ, ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿಯವರು 1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಜನಿಸಿದ್ದರು.

ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಎಂ.ಎ ಪದವಿ ಪಡೆದ ಇವರು, 1966ರಲ್ಲಿ ಪೂರ್ಣಚಂದ್ರ ತೇಜಸ್ವಿ ಜೊತೆ ವಿವಾಹವಾಗಿದ್ದರು. “ನನ್ನ ತೇಜಸ್ವಿ” ರಾಜೇಶ್ವರಿ ಅವರ ಮೊಟ್ಟ ಮೊದಲ ಪುಸ್ತಕವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹ್ಯಾಂಡ್ ಪೋಸ್ಟ್ ನ ತೋಟದ ಮನೆಯಲ್ಲಿ ವಾಸವಾಗಿದ್ದ ರಾಜೇಶ್ವರಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

You may also like

Leave a Comment