Home » Landslide: ಭಾರೀ ಮಳೆ, ಚಾರ್ಮಾಡಿ ಘಾಟ್‌ನಲ್ಲಿ ಸಾಲು ಸಾಲು ಗುಡ್ಡ ಕುಸಿತ

Landslide: ಭಾರೀ ಮಳೆ, ಚಾರ್ಮಾಡಿ ಘಾಟ್‌ನಲ್ಲಿ ಸಾಲು ಸಾಲು ಗುಡ್ಡ ಕುಸಿತ

7 comments
Charmadi Ghat

Landslide: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ಗಂಟೆಯಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮವಗಿ ಚಾರ್ಮಡಿ ಘಾಟ್‌ನಲ್ಲಿ ಸಾಲು ಸಾಲು ಗುಡ್ಡ ಕುಸಿತವಾಗಿದೆ. ಧಾರಾಕಾರ ಮಳೆಯಿಂದ ನೀರು ರಸ್ತೆಯ ನದಿಯಂತೆ ಹರಿಯುತ್ತಿದ್ದು, ಹೀಗಾಗಿ ಚಾರ್ಮಾಡಿ ಘಾಟ್‌ನಲ್ಲಿ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ವಾಹನಗಳು ಹಿಂದಕ್ಕೂ ಹೋಗದೇ, ಮುಂದಕ್ಕೆ ಹೋಗಲು ಆಗದೆ ಪರದಾಡುವಂತಾಗಿದೆ.

ಬೆಳ್ತಂಗಡಿ ತಾಲೂಕಿನ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದ್ದು, ಕಕ್ಕಿಂಜೆ, ಚಾರ್ಮಾಡಿ ಘಾಟ್‌ ರಸ್ತೆ ಸಂಪೂರ್ಣ ಜಲಮಯವಾಗಿದೆ. ನೆರಿಯಾ, ಪುಲ್ಲಾಜೆ ಸೇತುವೆಗಳು ಮುಳುಗಡೆಯಗಿದ್ದು, ಚಾರ್ಮಾಡಿಯ 3ನೇ ತಿರುವಿನಲ್ಲಿ ರಸ್ತೆ ಮೇಲೆ ನೀರು ನದಿಯಂತೆ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

You may also like

Leave a Comment