Home » CM Siddaramaiah: ತನ್ನ ಹುಟ್ಟುಹಬ್ಬದಂದೇ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ | ಅಂಬಾರಿ ಹೊತ್ತ ಆನೆಯ ಪುತ್ಥಳಿ ನೀಡಿ ಪಿ.ಎಂ. ಗೌರವಿಸಿದ ಸಿ.ಎಂ.

CM Siddaramaiah: ತನ್ನ ಹುಟ್ಟುಹಬ್ಬದಂದೇ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ | ಅಂಬಾರಿ ಹೊತ್ತ ಆನೆಯ ಪುತ್ಥಳಿ ನೀಡಿ ಪಿ.ಎಂ. ಗೌರವಿಸಿದ ಸಿ.ಎಂ.

by Praveen Chennavara
0 comments
CM Siddaramaiah

ದೆಹಲಿ: ತನ್ನ ಹುಟ್ಟು ಹಬ್ಬದಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ಆ.3ರಂದು ಸಂಸತ್ ಭವನಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಈ ವೇಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಕೊಟ್ಟು ಸನ್ಮಾಸಿದರು.ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾದರು.

ಭೇಟಿ ವೇಳೆ ಸಿದ್ದರಾಮಯ್ಯ ಅವರು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಪ್ರಧಾನಿ ಮೋದಿ ಅವರ ಬಳಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಶುಕ್ರವಾರ ಬೆಳಗ್ಗೆ ದೆಹಲಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಮೊದಲಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸುವಂತೆ ಮನವಿ ಮಾಡಿಕೊಂಡರು.ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯದ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಉಪಸ್ಥಿತರಿದ್ದರು.

 

ಇದನ್ನು ಓದಿ: ಸುಳ್ಯ: ಕಳಂಜದ ಮಸೂದ್ ಹತ್ಯೆ ಪ್ರಕರಣ : 8 ನೇ ಆರೋಪಿಗೆ ಷರತ್ತುಬದ್ದ ಜಾಮೀನು 

You may also like