1
ಪುತ್ತೂರು: ತುಂಬೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಮಂಗಳೂರು ಅಲೋಶಿಯಸ್ ವಿದ್ಯಾರ್ಥಿನಿ, ಪುತ್ತೂರಿನ ಕೂರ್ನಡ್ಕ ನಿವಾಸಿ ಹನಾ (19) ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂ ಶಮೀಮಾ ದಂಪತಿ ಪುತ್ರಿ ಹನಾ (19) ಮೃತಪಟ್ಟವರು. ಇವರು ಅಲೋಶಿಯಸ್ ನಲ್ಲಿ ಬಿಬಿಎಂ ವಿದ್ಯಾರ್ಥಿನಿ.
ಪುತ್ತೂರಿನಿಂದ ಮಂಗಳೂರು ಕಡೆಗೆ ಐ20 ಕಾರಿನಲ್ಲಿ ತೆರಳುತ್ತಿದ್ದಾಗ ಮಳೆಯ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ.
