High Court: ಕೇಂದ್ರ ಸರ್ಕಾರದ ನಿರ್ಬಂಧ ಪ್ರಶ್ನಿಸಿ ಟ್ವಿಟರ್ (Twitter) ಸಂಸ್ಥೆ ಅರ್ಜಿ ಸಲ್ಲಿಸಿದ್ದು, ಇದೀಗ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ವ್ಯಕ್ತಿಗತವಾಗಿ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಜಾರಿ ಮಾಡಿರುವ ನಿರ್ಬಂಧ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ್ದ ಅರ್ಜಿಗಳನ್ನು ಶುಕ್ರವಾರ ಕರ್ನಾಟಕ ಹೈಕೋರ್ಟ್ (High Court) ವಜಾ ಮಾಡಿ, 50 ಲಕ್ಷ ರೂ. ದಂಡ ವಿಧಿಸಿದೆ.
ದಂಡದ ಮೊತ್ತವನ್ನು 45 ದಿನಗಳಲ್ಲಿ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು. ಗಡುವು ಕಳೆದರೆ ಪ್ರತಿದಿನ 5 ಸಾವಿರ ದಂಡ ವಿಧಿಸಬೇಕಾಗುತ್ತದೆ ಎಂದು ನ್ಯಾಯಾಲಯವು ಆದೇಶ ಮಾಡಿದೆ.
ಕೇಂದ್ರ ಸರ್ಕಾರದ ಹತ್ತು ನಿರ್ಬಂಧ ಆದೇಶ ಮತ್ತು 2021ರ ಫೆಬ್ರವರಿಯಿಂದ 2022ರ ಫೆಬ್ರವರಿಯ ನಡುವೆ 39 ಯುಆರ್‌ಎಲ್‌ಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರ್ಕಾರ ಟ್ವಿಟರ್‌ಗೆ ನಿರ್ದೇಶಿಸಿತ್ತು. ಒಟ್ಟು 1,474 ಖಾತೆಗಳು ಮತ್ತು 175 ಟ್ರೇಟ್‌ಗಳ ಪೈಕಿ 39 ಯುರ್‌ಎಲ್‌ಗಳನ್ನು ನಿರ್ಬಂಧಿಸಿರುವ ಆದೇಶವನ್ನು ಮಾತ್ರ ಟ್ವಿಟರ್ ಅರ್ಜಿಯಲ್ಲಿ ಪ್ರಶ್ನಿಸಿತ್ತು.
ಆಕ್ಷೇಪಾರ್ಹ ಪೋಸ್ಟ್ ತೆಗೆಯಲು ಕೇಂದ್ರ ಸರ್ಕಾರದ ನೀಡಿದ್ದ ಸೂಚನೆಯನ್ನು ಪ್ರಶ್ನಿಸಿ ಟ್ವಿಟ್ಟರ್ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿತ್ತು.
ಈ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ಕೇಂದ್ರ ಸರ್ಕಾರದ ನೋಟಿಸ್ನ್ನು ಟ್ವಿಟರ್ ಸಂಸ್ಥೆ ಪಾಲಿಸಿಲ್ಲ. ವಿಭಿನ್ನ ಸಂದರ್ಭದಲ್ಲಿ ಆದೇಶ ಪಾಲಿಸಿರುವ ದಾಖಲೆಗಳನ್ನೂ ಟ್ವಿಟರ್ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಇದಕ್ಕಾಗಿ ಅರ್ಜಿ ವಜಾ ಮಾಡಿ, ಟ್ವಿಟರ್‌ಗೆ 50 ಲಕ್ಷ ದಂಡ ವಿಧಿಸಲಾಗಿದೆ.
ಇದನ್ನು ಓದಿ: Maha mythree meeting: ಮತ್ತೆ ಒಂದಾದ ವಿಪಕ್ಷಗಳು- ಜುಲೈ 13, 14ಕ್ಕೆ ಬೆಂಗಳೂರಲ್ಲಿ ಸಭೆ, ಶಕ್ತಿ ಪ್ರದರ್ಶನ !!
