Bajarang Dal: ಗೋ ಹತ್ಯೆ ತಡೆಯುವಲ್ಲಿ ಪೋಲಿಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಸಕಲೇಶಪುರ ಪಟ್ಟಣದಲ್ಲಿ ಶುಕ್ರವಾರ ನಡೆದ ಬಜರಂಗದಳದ ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡ ರಘು ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅದಲ್ಲದೆ ‘ತರಕಾರಿ, ಮೀನು ಮಾರಾಟ ಮಾಡಲು ಮುಸ್ಲಿಮರು ಹಿಂದೂಗಳ ಮನೆಯ ಬಳಿ ಬಂದರೆ ನಮ್ಮ ಮನೆಯಲ್ಲಿರುವ ಕೋವಿಯಿಂದ ಗುಂಡು ಹಾರಿಸಬೇಕಾಗುತ್ತದೆ’ ಎಂದು ವಿದಾತ್ಮಕ ಹೇಳಿಕೆ ನೀಡಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಇತ್ತೀಚಿಗೆ ಮಾತನಾಡುತ್ತಾ ಆದಳ ಈ ದಳ ಎಂದು ಹೇಳಿದ್ದಾರೆ, ನೇರವಾಗಿ ಬಜರಂಗದಳ (Bajarang Dal) ಹೇಳಲಿ ಆಗ ನಾವು ನಮ್ಮ ಬಜರಂಗದಳದ ತಾಕತ್ತು ತೋರಿಸುತ್ತೇವೆ ಎಂದು ಸವಾಲು ಹಾಕಿಲಾಗಿದೆ.
”ತರಕಾರಿ, ಮೀನು (vegetables, Fish) ಮಾರಾಟ ಮಾಡಲು ಹಿಂದೂಗಳ ಮನೆಯ ಬಳಿ ಬರುವಂತ ವ್ಯಾಪಾರಿಗಳು ಎಚ್ಚರಿಕೆಯಿಂದಿರಿ, ಇಲ್ಲಾಂದ್ರೆ ನಮ್ಮಲ್ಲಿರುವ ಕೋವಿಯೊಳಗಿನ ಗುಂಡು ಹೊರಗಡೆ ಬರುತ್ತೆ, ನಾವು ಕೂಡ ಗುಂಡು ಹಾರಿಸಬೇಕಾಗುತ್ತದೆ” ಎಂದು ಬೆದರಿಕೆ ಹಾಕಲಾಗಿದೆ.
