Home » Gyanavapi case: ಹಿಂದೂ ಗೆಲುವು, ಜ್ಞಾನ ವ್ಯಾಪಿ ಮಸೀದಿ ಸಮೀಕ್ಷೆಗೆ ಹೈ ಕೋರ್ಟ್ ಸಮ್ಮತಿ !

Gyanavapi case: ಹಿಂದೂ ಗೆಲುವು, ಜ್ಞಾನ ವ್ಯಾಪಿ ಮಸೀದಿ ಸಮೀಕ್ಷೆಗೆ ಹೈ ಕೋರ್ಟ್ ಸಮ್ಮತಿ !

0 comments
Gyanavapi case

Gyanavapi case: ಜ್ಞಾನವ್ಯಾಪಿ ಮಸೀದಿ ಭಾರತೀಯ ಪುರಾತತ್ವ ಇಲಾಖೆ ಸಮೀಕ್ಷೆಗೆ ಅನುಮತಿ ನೀಡಿ ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿದೆ. ಸರ್ವೆ ನಡೆಸಲು ಪುರಾತತ್ವ ಇಲಾಖೆಗೆ ಅನುಮತಿ ನೀಡಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದೇ ವೇಳೆ ಸರ್ವೆಗೆ ತಡೆ ಕೋರಿ ಮಸೀದಿ ಮುಸ್ಲಿಂ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಅಂಜುಮಾನ್‌ ಇಂತೆಜಾಮಿಯಾ ಮಸೀದಿಯ ನಿರ್ವಹಣಾ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಇತ್ತೀಚೆಗೆ ತಾತ್ಕಾಲಿಕ ತಡೆ ನೀಡಿತ್ತು. ಅಲ್ಲದೇ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚನೆ ನೀಡಿತ್ತು, ಜುಲೈ 27ರಂದು ನಡೆದ ವಿಚಾರಣೆ ವೇಳೆ ಸರ್ವಪಕ್ಷಗಳ ವಾದ ಆಲಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿ ಮುಂದಿನ ಆದೇಶದವರೆಗೆ, ಆ.3ರವರೆಗೆ ಅಲಹಾಬಾದ್‌ ಹೈ ಕೋರ್ಟ್(Alahabad high court ) ಎಎಸ್‌ಐ ಸಮೀಕ್ಷೆಗೆ ತಡೆ ನೀಡಿತ್ತು. ಇದೀಗ ತೀರ್ಪು ಪ್ರಕಟಿಸಿದ ಹೈಕೋರ್ಟ್, ಸರ್ವೆಗೆ ಅನುಮತಿ ನೀಡಿದೆ. ಈ ಕುರಿತು ವಾರಣಾಸಿ ಜಿಲ್ಲಾ ಕೋರ್ಟ್ ನೀಡಿದ್ದ ಅದೇಶವನ್ನೇ ಹೈಕೋರ್ಟ್ ಎತ್ತಿ ಹಿಡಿದಿದೆ.

ಕಾಶಿ ವಿಶ್ವನಾಥ ದೇವಸ್ಥಾನ(Kaashi vishwanath temple) ಬಳಿ ಇರುವ ಗ್ಯಾನವಾಪಿ (Gyanavapi case) ಮಸೀದಿಯನ್ನು ದೇವಾಲಯದ ಮೇಲೆ ನಿರ್ಮಾಣ ಮಾಡಲಾಗಿದೆಯೇ ಎಂಬುದನ್ನು ಪತ್ತೆ ಹಚ್ಚಲು ಭಾರತೀಯ ಪುರಾತತ್ವ ಇಲಾಖೆಗೆ ವಾರಣಾಸಿ ಕೋರ್ಟ್ ನೀಡಿದ್ದ ಸಮೀಕ್ಷೆ ಆದೇಶವನ್ನು ಪ್ರಶ್ನಿಸಿ ಮಸೀದಿ ಪರ ಮುಸ್ಲಿಂ ಸಮಿತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಜುಲೈ 27 ರಂದು ವಿಚಾರಣೆ ನಡೆಸಿದ ಹೈಕೋರ್ಟ್(highcourt) ಅಂಜುಮಾನ್‌ ಇಂತೆಜಾಮಿಯಾ ಮಸೀದಿ ಹಾಗೂ ಹಿಂದೂ ಪರವಾದ ವಾದಗಳನ್ನು ಆಲಿಸಿತು.

ಮಸೀದಿ (mosque) ಮೂಲಸ್ವರೂಪಕ್ಕೆ ಧಕ್ಕೆಯಾಗಲಿದೆ. ಮಸೀದಿಯಲ್ಲಿ ಪೋಟೋಗ್ರಫಿ, ವಿಡಿಯೋಗ್ರಫಿಗೆ ಆಕ್ಷೇಪವಿಲ್ಲ. ಸಮೀಕ್ಷೆ ಹೆಸರಲ್ಲಿ ಮಸೀದಿ ಗೋಡೆಯೊಂದನ್ನು ಈಗಾಗಲೇ ಕೆಡವಲಾಗಿದೆ. ಹೀಗಾಗಿ ಸಮೀಕ್ಷೆಗೆ ತಕ್ಷಣವೇ ತಡೆ ನೀಡಬೇಕು ಎಂದು ಮುಸ್ಲಿಂ ಸಮಿತಿ ಪರ ವಕೀಲರು ವಾದ ಮಂಡಿಸಿದ್ದರು.

ಇತ್ತ ಹಿಂದೂ ಪರ ವಕೀಲರು, ಕೆಲ ಆರೋಪಗಳನ್ನು ತಳ್ಳಿ ಹಾಕಿದ್ದರು. ಮಸೀದಿ ಗೋಡೆ ಕೆಡವಲಾಗಿದೆ ಎಂಬ ಆರೋಪ ಸುಳ್ಳು, ಒಂದು ಇಟ್ಟಿಗೆಯನ್ನೂ ತೆಗೆದಿಲ್ಲ. ಒಂದೇ ಒಂದು ಇಟ್ಟಿಗೆಗೂ ಧಕ್ಕೆಯಾಗದಂತೆ ಸಮೀಕ್ಷೆ ನಡೆಸಲಿದೆ. ಇಲ್ಲಿ ಯಾವುದೇ ಉತ್ಕನನ ನಡೆಯುತ್ತಿಲ್ಲ ಎಂದು ಹಿಂದೂ ಪರ ವಕೀಲರು ವಾದ ಮಂಡಿಸಿದ್ದರು.

ವಾದ ವಿವಾದ ಆಲಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪು ಅಗಸ್ಟ್ 3ಕ್ಕೆ ಕಾಯ್ದಿರಿಸಿತ್ತು. ಇಂದು ಈ ಕುರಿತು ಮಹತ್ವದ ತೀರ್ಪು ಪ್ರಕಟಿಸಿದೆ. ಹಿಂದೂಗಳ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ. ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಯನ್ನು ಪ್ರಾರಂಭಿಸಬಹುದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ ಎಂದು ಜ್ಞಾನವಾಪಿ ಸಮೀಕ್ಷೆ ಪ್ರಕರಣದಲ್ಲಿ ಹಿಂದೂ ಭಾಗವನ್ನು ಪ್ರತಿನಿಧಿಸುವ ವಕೀಲ ವಿಷ್ಣು ಶಂಕರ್ ಜೈನ್ ತಿಳಿಸಿದ್ದಾರೆ.

 

ಇದನ್ನು ಓದಿ: 7th pay commission: ಸರ್ಕಾರಿ ನೌಕರರಿಗೆ ಹೊಡೀತು ಬಂಪರ್ ಲಾಟ್ರಿ ; ಇದೇ ದಿನ ನೋಡಿ ವೇತನ ಹೆಚ್ಚಳ ಅನುಮೋದನೆ !

You may also like