Home » Mysore: ಸರ್ಕಾರಿ ಆಸ್ಪತ್ರೆಯ ವೈದ್ಯರು ಖಾಸಗಿ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡಲು ನಿರ್ಬಂಧ ?

Mysore: ಸರ್ಕಾರಿ ಆಸ್ಪತ್ರೆಯ ವೈದ್ಯರು ಖಾಸಗಿ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡಲು ನಿರ್ಬಂಧ ?

0 comments

Mysore: ಮೈಸೂರು: ಇತ್ತೀಚಿನ ದಿನಗಳಲ್ಲಿ ಸರಕಾರೀ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ಕೂಡ ಕಾರ್ಯ ನಿರ್ವಹಿಸುವುದು ಸಾಮಾನ್ಯವಾಗಿ ಬಿಟ್ಟಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳುವ ಯೋಜನೆ ಹಾಕಿಕೊಂಡರು ಕೂಡ ಕಾರ್ಯರೂಪಕ್ಕೆ ಬರಲು ಮಾತ್ರ ಇನ್ನೂ ಕೂಡ ಮುಹೂರ್ತ ಕೂಡಿ ಬಂದಿಲ್ಲ.

ದಿನೇಶ್ ಗುಂಡೂರಾವ್ ಅವರು ಆರೋಗ್ಯ ಸಚಿವರಾದ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ್ದು ಈ ವೇಳೆ ಸಚಿವರನ್ನು ಸಂಸದ ಪ್ರತಾಪ ಸಿಂಹ ಆದರದಿಂದ ಬರಮಾಡಿಕೊಂಡಿದ್ದಾರೆ. ಆರೋಗ್ಯ ಇಲಾಖೆಯಲ್ಲಿನ ಅರೆಕಾಲಿಕ ವೈದ್ಯರು ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ನಿರ್ಬಂಧ ಹೇರುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸುತ್ತಿರುವ ಕುರಿತು ಮೈಸೂರಿನಲ್ಲಿ (Mysore ) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಈ ಮೊದಲು ಒಂದೆಡೆ ವೈದ್ಯರ ಕೊರತೆ ಮತ್ತೊಂದೆಡೆ ಕೋರೋನಾ ಮಹಾಮಾರಿ ಲಗ್ಗೆ ಇಟ್ಟ ಬಳಿಕ ವೈದ್ಯರ ಅವಶ್ಯಕತೆ ಹೆಚ್ಚಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ ಕಡೆಗಳಲ್ಲಿ ಕೆಲಸ ಮಾಡಲು ಅನುವು ಮಾಡಲಾಗಿತ್ತು. ಪ್ರಸ್ತುತ ಅಷ್ಟು ಸಮಸ್ಯೆಗಳಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಆದೇಶಿಸುವ ಬಗ್ಗೆ ಚಿಂತನೆ ಮಾಡುತ್ತಿರುವ ಬಗ್ಗೆ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

ಚಾಮರಾಜನಗರ ಆಕ್ಸಿಜನ್ ದುರಂತದ ಕುರಿತು ಮರು ತನಿಖೆಗೆ ಅನುಮತಿ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಈ ಕುರಿತು ಸರ್ಕಾರ ಪ್ರತಿಕ್ರಿಯೆ ನೀಡಿದ್ದು, ಯಾವ ಅಂಶಗಳ ಆಧಾರದ ಮೇಲೆ ಮರು ತನಿಖೆ ಆಗಬೇಕು ಎಂಬ ಬಗ್ಗೆ ಎಂಬ ಚಾರ್ಜ್ ಫ್ರೇಮ್ ಮಾಡಿಕೊಡಲು ಸೂಚಿಸಿರುವ ಬಗ್ಗೆ ಇದೆ ವೇಳೆ ಮಾಹಿತಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಾವು ತನಿಖೆಯಾಗಬೇಕಾಗಿರುವ ಚಾರ್ಜ್ ಫ್ರೇಮನ್ನು ತಯಾರಿಸುತ್ತಿದ್ದು, ಚಾರ್ಜ್ ಫ್ರೇಮ್ ಪ್ರತಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ರವಾನೆ ಮಾಡುವ ಭರವಸೆಯನ್ನು ಕೂಡ ಸಚಿವರು ನೀಡಿದ್ದಾರೆ.

You may also like

Leave a Comment