Karnataka budget 2023: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ (Karnataka Budget ). ಈ ವೇಳೆ ಸಿದ್ದರಾಮಯ್ಯ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ (Karnataka Budget ) ಬೆಂಗಳೂರಿಗೆ ಒಟ್ಟು 45,000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.
ಬೆಂಗಳೂರು ವೈಟ್ ಟಾಪಿಂಗ್, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು ಮತ್ತು ದುರಸ್ತಿಗೆ 30 ಸಾವಿರ ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಅಲ್ಲದೇ ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಹಣ ಮೀಸಲಿಟ್ಟಿದ್ದಾರೆ.
ಮೇಟ್ರೋ 3ನೇ ಹಂತದ ಯೋಜನೆಗೆ 16328 ಕೋಟಿ, ತಾಜ್ಯ ನಿರ್ವಾಹಣೆ 1411 ಕೋಟಿ ರೂ., ಬೈಯಪ್ಪನಹಳ್ಳಿಯಲ್ಲಿ ಮೇಲು ಸೇತುವೆ ನಿರ್ಮಾಣಗೆ 263 ಕೋಟಿ ರೂ. ಮೀಸಲಿಟ್ಟಿದ್ದಾರೆ.
ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ ಯೋಜನೆ. 45 ಕಿ.ಮೀ ಉದ್ದದ ವಿಸ್ತೃತ ಯೋಜನೆ ವರದಿ ಕೇಂದ್ರ ಸಲ್ಲಿಸಲಾಗುವುದು. ಮಳೆ ಅನಾಹುತ ತಪ್ಪಿಸಲು ರಾಜಕಾಲುವೆ ಒತ್ತುವರಿ ತೆರವಿಗೆ , ಬೆಂಗಳೂರು ಸಂಚಾರ ದಟ್ಟಣೆ ನಿರ್ವಾಹಣೆಗೆ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಯೋಜನೆಗೆ ರೂಪಿಸಲಾಗಿದೆ.
ಇದನ್ನು ಓದಿ: Karnataka budget: APMC ತಿದ್ದುಪಡಿ ಕಾಯ್ದೆ ವಾಪಸ್ !! ಸರ್ಕಾರದ ಮಹತ್ವದ ಘೋಷಣೆ
