Home » Dakshina Kannada: ಮಸೀದಿಯ ಬಳಿ ಜೈಶ್ರೀರಾಮ್ ಘೋಷಣೆ ಕೂಗಿದ ಇಬ್ಬರ ಬಂಧನ

Dakshina Kannada: ಮಸೀದಿಯ ಬಳಿ ಜೈಶ್ರೀರಾಮ್ ಘೋಷಣೆ ಕೂಗಿದ ಇಬ್ಬರ ಬಂಧನ

by Praveen Chennavara
1 comment
Dakshina Kannada

Dakshina Kannada: ಕಡಬ, ಸೆ.25. ರಾತ್ರಿ ವೇಳೆಗೆ ಬೈಕ್ ನಲ್ಲಿ ಆಗಮಿಸಿ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಪೈಕಿ ಓರ್ವನನ್ನು ಘಟನೆ ನಡೆದು 24 ಗಂಟೆಗಳ ಒಳಗಾಗಿ ಕಡಬ(Dakshina Kannada)  ಪೊಲೀಸರು ಬಂಧಿಸಿದ್ದಾರೆ‌.

ಬಂಧಿತ ಆರೋಪಿಗಳನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಹಾಗೂ ಕೈಕಂಬ ನಡ್ತೋಟ ನಿವಾಸಿ ಸಚಿನ್ (26) ಎಂದು ಗುರುತಿಸಲಾಗಿದೆ. ಆರೋಪಿಗಳು ಭಾನುವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಕಡಬ ಠಾಣಾ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಬೈಕಿನಲ್ಲಿ ಆಗಮಿಸಿ ಮಸೀದಿಯ ವರಾಂಡದಲ್ಲಿ ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ಕಂಡು ಪರಾರಿಯಾಗಿದ್ದರು. ಬೈಕಿನಲ್ಲಿ ಕಾಂಪೌಂಡ್ ಒಳಗಡೆ ಬಂದು ತೆರಳುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ವಿಷಯ ತಿಳಿದು ತಕ್ಷಣವೇ ಸ್ಥಳಕ್ಕಾಗಮಿಸಿದ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್, ಉಪ್ಪಿನಂಗಡಿ ಠಾಣಾ ಸಬ್ ಇನ್ಸ್‌ಪೆಕ್ಟರ್ ರಾಜೇಶ್ ಹಾಗೂ ಸಿಬ್ಬಂದಿಗಳು ಪರಿಸರದ ವಿವಿಧ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದಾರೆ. ತನಿಖೆಯನ್ನು ಚುರುಕುಗೊಳಿಸಿದ ಕಡಬ ಎಸ್ಐ ಅಭಿನಂದನ್, ಎರಡು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಅದರಂತೆ ಸೋಮವಾರ ಸಂಜೆ ವೇಳೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

 

ಇದನ್ನು ಓದಿ: Most Expensive Wedding In the World:ಅಬ್ಬಬ್ಬಾ.. ಈ ಮದ್ವೆಗೆ ಖರ್ಚಾಗಿದ್ದು ಬರೋಬ್ಬರಿ 914 ಕೋಟಿ !! ಹಾಗಂತ ಇದು ಅಂಬಾನಿ ಮಕ್ಕಳ ಮದ್ವೆಯಲ್ಲ- ಹಾಗಿದ್ರೆ ಈ ಮದುವೆ ಯಾರದ್ದು ?!

You may also like

Leave a Comment