ಉಡುಪಿ: ಕಾಲೇಜು ವಿದ್ಯಾರ್ಥಿನಿಯರೇ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿ ಬಳಿಕ ವಾಟ್ಸಪ್ ಗ್ರೂಪ್ ಗಳಲ್ಲಿ ಹಂಚಿಕೊಂಡ ಪ್ರಕರಣವೊಂದು ನಗರದ ಪ್ರಸಿದ್ಧ ಖಾಸಗಿ ನೇತ್ರ ಚಿಕಿತ್ಸಾಲಯ ಮತ್ತು ನರ್ಸಿಂಗ್ ಹೋಂ ನಲ್ಲಿ ನಡೆದಿದೆ.
ಇಲ್ಲಿನ ಒಂದು ಕೋಮಿನ ವಿದ್ಯಾರ್ಥಿನಿಯರು ಸೇರಿಕೊಂಡು ಶೌಚಾಲಯದಲ್ಲಿ ಕ್ಯಾಮರಾ ಇರಿಸಿದ್ದು, ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಕ್ಕೆ ತೆರಳುವ ದೃಶ್ಯ ಸೆರೆಯಾಗಿತ್ತು. ಬಳಿಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಎರಡೂ ಕೋಮಿನ ಮಧ್ಯೆ ಜಡೆ ಜಗಳ ತಾರಕಕ್ಕೇರಿದ ವಿಚಾರ ಆಡಳಿತ ಮಂಡಳಿಯ ಗಮನಕ್ಕೆ ಬಂದಿತ್ತು.
ಕೂಡಲೇ ಎರಡೂ ಕಡೆಯ ವಿದ್ಯಾರ್ಥಿನಿಯರನ್ನು ಕರೆಸಿ ವಿಚಾರಣೆ ನಡೆಸಿದ ಸಂಸ್ಥೆಯ ಆಡಳಿತ ಮಂಡಳಿ ಕೃತ್ಯ ಎಸಗಿದ ಮೂವರು ಯುವತಿಯರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದು, ಈ ಬಗ್ಗೆ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.
