Home » Beer: ಬಿಯರ್ ಕುಡಿಯುವ ಕಾನೂನುಬದ್ಧ ವಯಸ್ಸು 21ಕ್ಕೆ ಇಳಿಕೆ!

Beer: ಬಿಯರ್ ಕುಡಿಯುವ ಕಾನೂನುಬದ್ಧ ವಯಸ್ಸು 21ಕ್ಕೆ ಇಳಿಕೆ!

0 comments

Beer: ಆದಾಯ ನಷ್ಟ ತಡೆಯಲು ಚಿಂತನೆ ನಡೆಸಿರುವ ದೆಹಲಿ ರಾಜ್ಯ ಸರ್ಕಾರ (Delhi Government) ಹೊಸ ಮದ್ಯ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದೆ. ಅದರ ಪ್ರಕಾರ ಬಿಯರ್‌ (Beer) ಕುಡಿಯುವ ಕಾನೂನು ಬದ್ಧ ವಯಸ್ಸನ್ನು 25‌ ರಿಂದ 21 ವರ್ಷಕ್ಕೆ ಇಳಿಸಲು ಯೋಜನೆ ಮಾಡಿದೆ.

ದೆಹಲಿ ಸುತ್ತಮುತ್ತಲಿನ ಪ್ರದೇಶಗಳಾದ ನೋಯ್ಡಾ, ಗುರುಗ್ರಾಮ್, ಗಾಜಿಯಾಬಾದ್ ಮತ್ತು ಫರಿದಾಬಾದ್‌ಗಳಲ್ಲಿ ಈಗಾಗಲೇ ಬಿಯರ್‌ ಕುಡಿಯುವ ಕಾನೂನುಬದ್ಧ ವಯೋಮಿತಿಯನ್ನ 21 ವರ್ಷಕ್ಕೆ ಇಳಿಸಲಾಗಿದೆ. ದೆಹಲಿಯಲ್ಲಿ ವಯೋಮಿತಿ ಕಡಿಮೆ ಮಾಡುವುದರಿಂದ ಅಕ್ರಮ ಮದ್ಯ ಮಾರಾಟ ತಪ್ಪುತ್ತದೆ. ಜೊತೆಗೆ ಬ್ಲ್ಯಾಕ್‌ ಮಾರ್ಕೆಟ್‌ ಅನ್ನೂ ನಿಯಂತ್ರಿಸಬಹುದು ಎಂದು ಅಧಿಕಾರಿಗಳು ಸರ್ಕಾರಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ:CP Radhakrishnan: 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕಾರ

ಆದಾಯ ನಷ್ಟ ತಡೆಯಲು ಯೋಜನೆ
ಮೂಲಗಳ ಪ್ರಕಾರ, ಹೊಸ ಅಬಕಾರಿ ನೀತಿ ಕರಡನ್ನು ಸಿ:ದ್ಧಪಡಿಸಲಾಗುತ್ತಿದೆ. ಅದರಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಪರಿಗಣಿಸಲಾಗುತ್ತಿದೆ. ನೆರೆಯ ರಾಜ್ಯದ ಮದ್ಯದ ಬೆಲೆಗಳ ವ್ಯತ್ಯಾಸದಿಂದಾಗಿ ದೆಹಲಿ ನಷ್ಟ ಅನುಭವಿಸದಂತೆ ನೋಡಿಕೊಳ್ಳುವುದು ಹೊಸ ನೀತಿಯ ಗುರಿಯಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

You may also like