Home » U T Khadar: ಕುಂಭಮೇಳದಲ್ಲಿ ಪಾಲ್ಗೊಂಡ ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್

U T Khadar: ಕುಂಭಮೇಳದಲ್ಲಿ ಪಾಲ್ಗೊಂಡ ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್

0 comments

U T Khadar: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಅಪರೂಪಕ್ಕೊಮ್ಮೆ ನಡೆಯುವ ಕುಂಭ ಮೇಳ ಬಹಳ ವೈಭವದಿಂದ ನಡೆಯುತ್ತಿದೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಾಧು- ಸಂತರು ಮಾತ್ರವಲ್ಲದೆ ಅನೇಕ ಗಣ್ಯಮಾನ್ಯರು ಆಗಮಿಸುತ್ತಿದ್ದಾರೆ. ಅಂತೆಯೇ ಇದೀಗ ಕುಂಭಮೇಳದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು. ಟಿ ಖಾದರ್(UT Khadar)ಅವರು ಭಾಗಿಯಾಗಿದ್ದಾರೆ.

ಹೌದು, ಉತ್ತರ ಪ್ರದೇಶ ವಿಧಾನಸಭೆ ಅಧ್ಯಕ್ಷ ಸತೀಶ್ ಮಹಾನ ಅವರ ಆಹ್ವಾನದ ಮೇರೆಗೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಅದ್ದೂರಿಯಾಗಿ ಆಯೋಜನೆಗೊಂಡಿರುವ ಮಹಾಕುಂಭಮೇಳ ಕಾರ್ಯಕ್ರಮದಲ್ಲಿ ಖಾದರ್ ಭಾಗವಹಿಸಿದ್ದಾರೆ. ಸಹಾಯಕ ಆಯುಕ್ತ ದಶರಥ ಕುಮಾರ್ ಅವರನ್ನು ಆತ್ಮೀಯವಾಗಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

You may also like