Home » ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ : `LPG’ ಸಿಲಿಂಡರ್ ಬೆಲೆಯಲ್ಲಿ ಇಳಿಕೆ!

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ : `LPG’ ಸಿಲಿಂಡರ್ ಬೆಲೆಯಲ್ಲಿ ಇಳಿಕೆ!

by Mallika
0 comments

ಎಲ್ ಪಿಜಿ (LPG) ಸಿಲಿಂಡರ್ ಗಳ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಆದರೆ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. 19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಇಂದಿನಿಂದ 115 ಇಳಿಕೆಯಾಗಿದೆ.

ನವೆಂಬರ್ 1 ರಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 115.5 ರೂ., ಕೋಲ್ಕತಾದಲ್ಲಿ 113 ರೂ., ಮುಂಬೈನಲ್ಲಿ 115.5 ರೂ., ಚೆನ್ನೈನಲ್ಲಿ 116.5 ರೂ. ಇಳಿಕೆಯಾಗಿದೆ. ಇದಕ್ಕೂ ಮೊದಲು ಅಕ್ಟೋಬರ್ 1 ರಂದು, ಈ ಸಿಲಿಂಡರ್ ಬೆಲೆಯನ್ನು 25 ರೂ.ಗಳಷ್ಟು ಕಡಿಮೆಮಾಡಲಾಗಿತ್ತು. 14.2 ಕೆಜಿ ತೂಕದ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಹಳೆಯ ಬೆಲೆಯಲ್ಲಿ ಲಭ್ಯವಾಗಲಿದೆ.

You may also like

Leave a Comment