LPG: ಕೇಂದ್ರ ಸರ್ಕಾರವು ಜನಸಾಮಾನ್ಯರಿಗೆ ಅನುಕೂಲವಾಗಲೆಂದು ಸಬ್ಸಿಡಿ ದರದಲ್ಲಿ ಎಲ್‌ಪಿಜಿ ಸಿಲಿಂಡರ್ ಗಳನ್ನು ಪ್ರತಿ ಮನೆಗಳಿಗೂ ನೀಡುತ್ತಿದೆ. ಆದರೆ ಇದೀಗ ರಾಜ್ಯ ಸರ್ಕಾರವೊಂದು ಕೇವಲ 300 ರೂಪಾಯಿಗೆ ಸಬ್ಸಿಡಿ ದರದಲ್ಲಿ ಸಿಲಿಂಡರ್ ಘೋಷಣೆ ಮಾಡಿದೆ.
ಹೌದು, ಅಸ್ಸಾಂ ಸರ್ಕಾರ ಕೇವಲ ₹300ಗೆ ಎಲ್‌ಪಿಜಿ ಸಿಲಿಂಡರ್ ಲಭ್ಯವಾಗುವಂತೆ ಪ್ರಮುಖ ಸಬ್ಸಿಡಿಯನ್ನು ಘೋಷಿಸಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಅಡಿಯಲ್ಲಿ ಕಡಿಮೆ ಆದಾಯದ ಕುಟುಂಬಗಳನ್ನು ಗುರಿಯಾಗಿರಿಸಿ ಈ ಘೋಷಣೆ ಮಾಡಲಾಗಿದೆ.
ಈ ಕುರಿತಾಗಿ ರಾಜ್ಯದ ಮುಖ್ಯಮಂತ್ರಿಗಳು, ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ 300 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ಶೀಘ್ರದಲ್ಲೇ ಕೈಸೇರಲಿದೆ ಎಂದು ಘೋಷಿಸಿದರು. ಕಡಿಮೆ ಆದಾಯದ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಈ ಉಪಕ್ರಮವು ಒರುನೋಡೈ ಯೋಜನೆ ಮತ್ತು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ 250 ರೂಪಾಯಿ ಸಬ್ಸಿಡಿ ಒದಗಿಸುತ್ತದೆ ಎಂದಿದ್ದಾರೆ.
