ಬೆಂಗಳೂರು: ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಹುದ್ದೆಯಾದ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಎಂ.ಎ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯ ಸರಕಾರ ಶುಕ್ರವಾರ ಸಂಜೆ ಅಧಿಕೃತ ಪ್ರಕಟಣೆ ಹೊರಡಿಸಿದೆ.
1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಇವರು ಡಿಜಿಪಿ ಅಲೋಕ್ ಮೋಹನ್ ಅವರು ನಿವೃತ್ತರಾದ ನಂತರ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಕಳೆದ ಮೇ 21, 2025ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರು 2026ರ ಜೂನ್‌ನಲ್ಲಿ ನಿವೃತ್ತರಾಗಲಿದ್ದು, ಸುಮಾರು ಒಂದು ವರ್ಷಗಳ ಕಾಲ ಅಧಿಕಾರ ನಿರ್ವಹಿಸಲಿದ್ದಾರೆ. ಡಾ. ಎಂ.ಎ. ಸಲೀಂ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದಾರೆ. .ರಾಜ್ಯ ಗುಪ್ತಚರ ವಿಭಾಗದ ಮುಖ್ಯಸ್ಥರಾಗಿ ಮತ್ತು ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್‌ಮೆಂಟ್ (CID) ನ ಡಿಜಿಪಿಯಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಏಷ್ಯಾನೆಟ್ ವರದಿ ಮಾಡಿದೆ.
