3
Madhu Bangarappa : ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕುರಿತಾಗಿ ಮಧು ಬಂಗಾರಪ್ಪ ಅವರು ಬೆಳಗಾವಿ ಅಧಿವೇಶನದಲ್ಲಿ ಘೋಷಣೆ ಮಾಡಿದ್ದಾರೆ. ಅಲ್ಲದೆ ಇದಕ್ಕಾಗಿ ರೂ. 111.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಹೌದು, ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಜಗದೇವ್ ಗುತ್ತೇದಾರ್ ಮತ್ತು ಕೇಶವ ಪ್ರಸಾದ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿ ಮಧು ಬಂಗಾರಪ್ಪ ಅವರು ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 44525 ಶಾಲೆಗಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
