Home » Madhu Bangarappa: 18,800 ಕ್ಕೂ ಅಧಿಕ ಶಿಕ್ಷಕರ ನೇಮಕಾತಿ, ಶೀಘ್ರ ಅಧಿಸೂಚನೆ- ಮಧು ಬಂಗಾರಪ್ಪ

Madhu Bangarappa: 18,800 ಕ್ಕೂ ಅಧಿಕ ಶಿಕ್ಷಕರ ನೇಮಕಾತಿ, ಶೀಘ್ರ ಅಧಿಸೂಚನೆ- ಮಧು ಬಂಗಾರಪ್ಪ

0 comments
Madhu Bangarappa

Madhu Bangarappa: ರಾಜ್ಯದ ಸರಕಾರಿ ಶಾಲೆಗಳಿಗೆ 13,000 ಶಿಕ್ಷಕರು, ಅನುದಾನಿತ ಶಾಲೆಗಳಿಗೆ 5800 ಶಿಕ್ಷಕರು ಸೇರಿ ಒಟ್ಟು 18,800 ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕುರಿತು ಸಿದ್ಧತೆ ನಡೆದಿದೆ. ಶೀಘ್ರವೇ ಈ ಕುರಿತು ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್‌.ಮಧು ಬಂಗಾರಪ್ಪ ಅವರು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಅನುದಾನಿತ ಶಾಲೆಗಳಿಗೆ ಸುಮಾರು 5800 ಶಿಕ್ಷಕರ ನೇಮಕಾತಿ ನಡೆಯಲಿದೆ. ಒಟ್ಟು 18,800ಕ್ಕೂ ಹೆಚ್ಚು ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಪ್ರಕ್ರಿಯೆ ಸಿದ್ಧತೆ ನಡೆದಿದ್ದು ಶೀಘ್ರವೇ ನೋಟಿಫಿಕೇಶನ್‌ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ:Nitin Ghadkari: ಹೊಸ ಕಾರು ಖರೀದಿ ಮಾಡುವವರಿಗೆ ಸಿಹಿ ಸುದ್ದಿ ನೀಡಿದ ನಿತಿನ್‌ ಗಡ್ಕರಿ

ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಅವರ ವರದಿ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿತ್ತು. ಈಗ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

 

You may also like