Home » Subrahmanya: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆ!

Subrahmanya: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆ!

0 comments

Subrahmanya: ರಾಜ್ಯದ ನಂ.1 ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ (Subrahmanya) ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಕುಮಾ‌ರ್ ಕರಿಕ್ಕಳ ಅವರನ್ನು ಆಯ್ಕೆ ಮಾಡಲು ಜಿಲ್ಲಾ ಕಾಂಗ್ರೆಸ್ ನೇತೃತ್ವ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರ ಪಟ್ಟಿ ಅಂತಿಮಗೊಂಡಿದ್ದು ಮೇ.12ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ನೂತನ ವ್ಯವಸ್ಥಾಪನಾ ಸಮಿತಿ ಸದಸ್ಯರು ಅಧಿಕಾರ ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸದಸ್ಯರು ಸಭೆ ನಡೆಸಿ ಅಧ್ಯಕ್ಷರ ಅಧಿಕೃತ ಆಯ್ಕೆ ನಡೆಸಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ಸಂಜೆ ಮಂಗಳೂರಿನಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ತಿಳಿದು ಬಂದಿದೆ.

You may also like