Home » Mallikarjuna Kharge: ರಾಜ್ಯ ಕಾಂಗ್ರೆಸ್‌ನಿಂದ ವಿವಾದಾತ್ಮಕ ಟ್ವೀಟ್‌ ಬೆನ್ನಲ್ಲೇ ಖರ್ಗೆ ಪ್ರತಿಕ್ರಿಯೆ!

Mallikarjuna Kharge: ರಾಜ್ಯ ಕಾಂಗ್ರೆಸ್‌ನಿಂದ ವಿವಾದಾತ್ಮಕ ಟ್ವೀಟ್‌ ಬೆನ್ನಲ್ಲೇ ಖರ್ಗೆ ಪ್ರತಿಕ್ರಿಯೆ!

0 comments
Mallikarjun Kharge

Mallikarjuna Kharge: ಕರ್ನಾಟಕ ರಾಜ್ಯ ಕಾಂಗ್ರೆಸ್‌ ಗಾಂಧೀಜಿ ಫೋಟೋ ಹಾಕಿ ಶಾಂತಿ ಮಂತ್ರ ಜಪಿಸಿದೆ. ಎಕ್ಸ್‌ನಲ್ಲಿ ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ ಎಂದು ಮಹಾತ್ಮ ಗಾಂಧಿಯವರ ಹೇಳಿಕೆಯನ್ನು ಕಾಂಗ್ರೆಸ್‌ ಟ್ವೀಟ್‌ ಮಾಡಿತ್ತು. ಈ ಟ್ವೀಟ್‌ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಕೂಡಲೇ ಕಾಂಗ್ರೆಸ್‌ ಆ ಟ್ವೀಟನ್ನು ಡಿಲೀಟ್‌ ಮಾಡಿದೆ. ಹೀಗೆ ಕರ್ನಾಟಕ ಕಾಂಗ್ರೆಸ್‌ ದೇಶದ ಸಂಕಷ್ಟಕಾಲದಲ್ಲಿ ಈ ರೀತಿಯ ಶಾಂತಿ ಕತೆ ಹೇಳಿ ವಿವಾದ ಸೃಷ್ಟಿಸಿದ್ದರೆ ಅತ್ತ ಕಡೆ ಎಐಸಿಸಿ ಅಧ್ಯಕ್ಷ, ಮಲ್ಲಿಕಾರ್ಜುನ್‌ ಖರ್ಗೆ ಅವರು ಸೇನಾ ಕಾರ್ಯಾಚರಣೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಅವರು ಪೋಸ್ಟ್ ಮಾಡಿದ್ದು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಿಂದ ಹೊರಹೊಮ್ಮುವ ಎಲ್ಲಾ ರೀತಿಯ ಭಯೋತ್ಪಾದನೆಯ ವಿರುದ್ಧ ಭಾರತವು ದೃಢವಾದ ರಾಷ್ಟ್ರೀಯ ನೀತಿಯನ್ನು ಹೊಂದಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ಹತ್ತಿಕ್ಕಿರುವ ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ನಮಗೆ ತುಂಬಾ ಹೆಮ್ಮೆಯಿದೆ. ಅವರ ದೃಢನಿಶ್ಚಯ ಮತ್ತು ಧೈರ್ಯವನ್ನು ನಾವು ಶ್ಲಾಘಿಸುತ್ತೇವೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ದಿನದಿಂದ, ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಯಾವುದೇ ನಿರ್ಣಾಯಕ ಕ್ರಮ ಕೈಗೊಳ್ಳಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಶಸ್ತ್ರ ಪಡೆಗಳು ಮತ್ತು ಸರ್ಕಾರದೊಂದಿಗೆ ಸ್ಪಷ್ಟವಾಗಿ ನಿಂತಿದೆ. ರಾಷ್ಟ್ರೀಯ ಏಕತೆ ಮತ್ತು ಒಗ್ಗಟ್ಟು ಇಂದಿನ ಅಗತ್ಯವಾಗಿದೆ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಮ್ಮ ಸಶಸ್ತ್ರ ಪಡೆಗಳೊಂದಿಗೆ ನಿಂತಿದೆ. ನಮ್ಮ ನಾಯಕರು ಹಿಂದೆ ಇದೇ ಮಾರ್ಗವನ್ನು ತೋರಿಸಿದ್ದಾರೆ ಮತ್ತು ರಾಷ್ಟ್ರೀಯ ಹಿತಾಸಕ್ತಿ ನಮಗೆ ಅತ್ಯುನ್ನತವಾಗಿದೆ ಎಂದು ಖರ್ಗೆ ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

 

You may also like