1
Heart Attack: 25 ನೇ ವಾರ್ಷಿಕೋತ್ಸವದಲ್ಲಿ ವ್ಯಕ್ತಿಯೊಬ್ಬರು ಪತ್ನಿ ಜೊತೆ ನೃತ್ಯ ಮಾಡುತ್ತಿರುವ ಸಂದರ್ಭದಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.
ತನ್ನ ಮದುವೆ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಪತ್ನಿ ಜೊತೆ ನೃತ್ಯ ಮಾಡುತ್ತಿದ್ದಾಗ, ಏಕಾಏಕಿ ಕುಸಿದು ಬಿದ್ದಿದ್ದಾರೆ. ಅತಿಥಿಗಳು ಅವರನ್ನು ಎತ್ತಲು ಕೂಡಲೇ ಧಾವಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತ ಹೊಂದಿದ್ದರು. ಹೃದಯಾಘಾತದಿಂದ ಅವರು ಸಾವಿಗೀಡಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಘಟನೆಯ ವೀಡಿಯೋ ವೈರಲ್ ಆಗಿದ್ದು, ಮೃತ ವ್ಯಕ್ತಿಯನ್ನು ವಾಸಿಮ್ ಸರ್ವತ್ ಎಂದು ಗುರುತಿಸಲಾಗಿದೆ.
