Home » ಕೂದಲು ಉದುರುವ ಸಮಸ್ಯೆ ಮನನೊಂದು ಯುವಕ ಆತ್ಮಹತ್ಯೆ

ಕೂದಲು ಉದುರುವ ಸಮಸ್ಯೆ ಮನನೊಂದು ಯುವಕ ಆತ್ಮಹತ್ಯೆ

by Praveen Chennavara
0 comments

ಕಾಡಲ್ಲೊಂದು ಸೊಪ್ಪು ಸಿಕ್ತದೆ..ಅದನ್ನು ಹಾಕಿದರೆ ಕೂದಲು ಬರುತ್ತದೆ ಎಂಬುದು ಕಾಂತಾರ ಸಿನಿಮಾದಿಂದ ಹುಟ್ಟಿಕೊಂಡ ಹೊಸ ಜೋಕ್..ಆದರೆ ಕೂದಲು ಉದುರುವ ಸಮಸ್ಯೆಯಿಂದ ರೋಸಿ ಹೋದವರು ಅನೇಕರು.

ಆದರೆ ಇಲ್ಲೊಬ್ಬ ಯುವಕ ಕೂದಲು ಉದುರುವ ಸಮಸ್ಯೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಈ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದ್ದು, ಪ್ರಶಾಂತ್ (29) ಆತ್ಮಹತ್ಯೆಗೆ ಶರಣಾದ ಯುವಕ.

ಪ್ರಶಾಂತ್ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಅಥೋಲಿ ಗ್ರಾಮದ ನಿವಾಸಿ. ಪ್ರಶಾಂತ್ ವೆಹಿಕಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಪ್ರಶಾಂತ್‌ಗೆ ಹುಬ್ಬು ಸೇರಿದಂತೆ ತಲೆಕೂದಲು ಉದುರುತ್ತಿತ್ತು. ಇದರಿಂದಾಗಿ 2014ರಿಂದ ಕೂದಲು ಉದುರುವಿಕೆಗೆ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಿದರೂ ತಲೆ ಕೂದಲು ಉದುರುವುದು ನಿಂತಿರಲಿಲ್ಲ.

ಆದರೆ ಯಾವುದು ಪ್ರಯೋಜನವಾಗಿರಲಿಲ್ಲ. ಅಷ್ಟೇ ಅಲ್ಲದೇ ಕೂದಲು ಇಲ್ಲ ಎಂದು ಅನೇಕರು ಆತನನ್ನು ಮದುವೆಯಾಗಲು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದ ಪ್ರಶಾಂತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕೂದಲು ಉದುರುವ ಸಮಸ್ಯೆಯಿಂದ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಕೂದಲು ಉದುರುವ ಸಮಸ್ಯೆ ಹಾಗೂ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ.

You may also like

Leave a Comment