5
Mandya: ಅಂತ್ಯಕ್ರಿಯೆ ನಡೆಸಲು ಸ್ಮಶಾನದಲ್ಲಿ ಜಾಗ ನೀಡಲಿಲ್ಲವೆಂಬ ಕಾರಣಕ್ಕೆ ನಡು ರಸ್ತೆಯಲ್ಲಿಯೇ ಅಂತ್ಯಕ್ರಿಯೆ ನಡೆಸಿದಂತಹ ವಿಚಿತ್ರ ಪ್ರಕಾರ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ಸತೀಶ್ ಎಂಬ ಯುವಕ ಮೃತಪಟ್ಟಿದ್ದ. ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಅಮಾನವೀಯ ಘಟನೆ ನಡೆದಿದೆ.
