Home » ಮಂಗಳೂರು : ಮತ್ತೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು | ವಿರೋಧಿಸಿ ಪ್ರತಿಭಟನೆ

ಮಂಗಳೂರು : ಮತ್ತೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು | ವಿರೋಧಿಸಿ ಪ್ರತಿಭಟನೆ

by Praveen Chennavara
0 comments

ಮಂಗಳೂರು : ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಸದ್ದು ಮಾಡುತ್ತಿದ್ದು, ಮಂಗಳೂರಿನ ಯುನಿವರ್ಸಿಟಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಹಾಕಿ ಬಂದಿರವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಂಗಳೂರಿನ ಹಂಪನ ಕಟ್ಟೆ ಕಾಲೇಜಿನಲ್ಲಿ ಹಿಜಾಬ್ ಸಂಬಂಧ ಕಾಲೇಜು ಆಡಳಿತ ಮಂಡಳಿ ಕೆಲ ದಿನಗಳ ಹಿಂದೆ ಸಭೆ ನಡೆಸಿತ್ತು. ಸಭೆಯಲ್ಲಿ ಹಿಜಾಬ್ ಧರಿಸದಂತೆ ತೀರ್ಮಾನಿಸಲಾಗಿತ್ತು. ಆದರೆ ಕೆಲ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದಿದ್ದಾರೆ.

ಹಿಜಾಬ್ ಧರಿಸಿ ಕಾಲೇಜಿಗೆ ಕೆಲ ವಿದ್ಯಾರ್ಥಿನಿಯರು ಬಂದ ಹಿನ್ನೆಲೆಯಲ್ಲಿ ಎಬಿವಿಪಿ ವಿದ್ಯಾರ್ಥಿಗಳು ಹಿಜಾಬ್ ವಿರೋಧಿಸಿ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

You may also like

Leave a Comment