Home » Mangalore university collage: ಹಿಜಾಬ್ ವಿವಾದ ಹುಟ್ಟಿಕೊಂಡ ಮಂಗಳೂರು ವಿವಿ ಕಾಲೇಜಲ್ಲಿ ಮತ್ತೊಂದು ವಿವಾದ!! ಹಿಂದೂ ಮಖಂಡನ ಆಗಮಕ್ಕೆ ತೀವ್ರ ವಿರೋಧ!!

Mangalore university collage: ಹಿಜಾಬ್ ವಿವಾದ ಹುಟ್ಟಿಕೊಂಡ ಮಂಗಳೂರು ವಿವಿ ಕಾಲೇಜಲ್ಲಿ ಮತ್ತೊಂದು ವಿವಾದ!! ಹಿಂದೂ ಮಖಂಡನ ಆಗಮಕ್ಕೆ ತೀವ್ರ ವಿರೋಧ!!

by ಹೊಸಕನ್ನಡ
0 comments
Mangalore university collage

Mangalore university collage: ಹಿಜಾಬ್ ವಿವಾದ (Hijab controversy) ಭುಗಿಲೆದ್ದಿದ್ದ ಮಂಗಳೂರಿನ ಕಾಲೇಜಿನಲ್ಲಿ ಮತ್ತೊಂದು ವಿವಾದ ಎದ್ದಿದ್ದು, ಇದೀಗ ಮತ್ತೊಂದು ವಿವಾದದ ಮೂಲಕವೇ ಮಂಗಳೂರು ವಿವಿ ಕಾಲೇಜು ಮತ್ತೆ ಸುದ್ದಿಯಾಗಿದೆ.

ಹೌದು, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು (Mangalore university collage) ವಿವಾದಗಳಿಂದಲೇ ಹೆಚ್ಚು ಗಮನ ಸೆಳೆದಿರುವಂತಹದು. ರಾಜ್ಯದಲ್ಲಿ ಭಾರೀ ಸಂಚಲನ ಉಂಟುಮಾಡಿದ್ದ ಹಿಜಾಬ್ ವಿವಿದವೂ ಕೂಡ ಇಲ್ಲಿಂದಲೇ ಆರಂಭವಾಗಿದ್ದು. ಅಂತೆಯೇ ಹಿಜಾಬ್ ವಿವಾದ ಭುಗಿಲೆದ್ದ ಮಂಗಳೂರಿನ ಈ ಕಾಲೇಜಿನಲ್ಲಿ ಮತ್ತೊಂದು ವಿವಾದ ಹುಟ್ಟಿಕೊಂಡಿದ್ದು, ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಅಪಸ್ವರ ಕೇಳಿಬಂದಿದೆ. ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಿದ್ದಕ್ಕೆ ಎನ್ಎಸ್​ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಅಂದಹಾಗೆ ಹಿಜಾಬ್ ವಿವಾದವು ತಣ್ಣಗಾದ ಕೂಡಲೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ(Mangalore VV Collage) ಮತ್ತೆ ಕಿಡಿಯೊಂದು ಹೊತ್ತಿಕೊಳ್ಳುವ ಲಕ್ಷಣ ಎದುರಾಗಿದೆ. ಇಂದು ನಡೆಯಬೇಕಿದ್ದ ಪ್ರತಿಭಾ ದಿನಾಚರಣೆ ಮತ್ತು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಹಿಂದೂ ಮುಖಂಡರಾದ ಶ್ರೀಕಾಂತ್ ಶೆಟ್ಟಿ ಕಾರ್ಕಳ(Shreekanth shetty karkala) ಇವರಿಗೆ ಆತಿಥಿಗಳಾಗಿ ಆಹ್ವಾನಿಸಿದಕ್ಕೆ ಅಪಸ್ವರ ಕೇಳಿಬಂದಿದೆ. ಹೀಗಾಗಿ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿ ಕಾರ್ಯಕ್ರಮವನ್ನು ಮುಂದೂಡಿದ್ದು, ನಾಳೆ ಎಂದಿನಂತೆ ತರಗತಿ ನಡೆಯಲಿವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂ ಮುಖಂಡನ ಆಗಮನಕ್ಕೆ ಎನ್ಎಸ್ ಯುಐ(NSUI) ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾಲೇಜಿನಲ್ಲಿ ಕೋಮು ವಿಷಬೀಜ ಬಿತ್ತಲು ಯತ್ನ ಅಂತ ಆರೋಪಿಸಿದೆ. ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡಲ್ಲ ಅಂತ ಎಬಿವಿಪಿಗೆ ಎಚ್ಚರಿಕೆ ನೀಡಿದೆ. ಅಲ್ಲದೇ ಮಂಗಳೂರು ಕಮಿಷನರ್ ಹಾಗೂ ಕಾಲೇಜು ಪ್ರಾಂಶುಪಾಲರಿಗೂ ಎನ್ಎಸ್ ಯುಐ ದೂರು ನೀಡಿದ್ದು, ಶ್ರೀಕಾಂತ್ ಶೆಟ್ಟಿ ಅತಿಥಿಯಾದ್ರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿತ್ತು.

ಇನ್ನು ಕೋಮು ಭಾವನೆ ಕೆರಳಿಸುವ ವ್ಯಕ್ತಿಗಳಿಗೆ ಸರ್ಕಾರಿ ಕಾಲೇಜು(Government collage) ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಕೋಮು ಭಾವನೆ ಕೆರಳಿಸುವ ಕಾರ್ಯ ಇವರಿಂದ ಆಗುತ್ತದೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತರಲಾಗಿದೆ ಎಂದಿದೆ. ಈ ಮಧ್ಯೆ ಎಬಿವಿಪಿ ಮತ್ತು ಕಾಲೇಜು ಸಂಘದ ಮುಖಂಡರು ಅತಿಥಿ ಬದಲಾವಣೆ ಮಾಡಲ್ಲ ಅಂತ ಪಟ್ಟು ಹಿಡಿದಿದ್ದು, ನಾಳೆ ಕಾರ್ಯಕ್ರಮ ನಡೆಯದಿದ್ದರೂ ಮುಂದಿನ ಕಾರ್ಯಕ್ರಮದಲ್ಲಿ ಶ್ರೀಕಾಂತ್ ಶೆಟ್ಟಿಯನ್ನೇ(Shrrkanth shetty) ಅತಿಥಿ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಸದ್ಯ ಈ ವಿವಾದ ಎನ್ಎಸ್​ಯುಐ ಮತ್ತು ಎಬಿವಿಪಿ(ABVP) ವಿದ್ಯಾರ್ಥಿ ಸಂಘಟನೆಗಳ ಗುದ್ದಾಟಕ್ಕೆ ಕಾರಣವಾಗಿದೆ.

You may also like

Leave a Comment