2
Mangaluru: ಸೆಂಟ್ರಲ್ ರೈಲು ನಿಲ್ದಾಣ ರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ದ್ರವ್ಯ ಸೇವನೆ ಮಾಡಿದ್ದ ವ್ಯಕ್ತಿಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪ್ರವೀಣ್ ಹಾಲಪ್ಪ (20) ಎಂದು ಗುರುತಿಸಲಾಗಿದೆ.
ಈತ ಮೂಲತಃ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಜಲಗೇರಿ ತಾಂಡದವನಾಗಿದ್ದು, ಬೈಕಂಪಾಡಿ ಮೀನಕಳಿಯದಲ್ಲಿ ವಾಸವಿದ್ದ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ದೃಢಪಟ್ಟಿದೆ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
