1
Mangaluru: ಮಂಗಳೂರು (Mangaluru) ನಗರದ ಪೊಲೀಸ್ ಕಮಿಷನರೇಟ್ ನ ಒಟ್ಟು ಐವತ್ತಾರು ಪೊಲೀಸ್ ಸಿಬ್ಬಂದಿಯನ್ನು ವರ್ಗಾಯಿಸಲಾಗಿದ್ದು ಅದರಲ್ಲಿ ಮುಖ್ಯವಾಗಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಬಜ್ಪೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಶೀದ್ ಅವರ ಹೆಸರು ಕೂಡಾ ಸೇರ್ಪಡೆಗೊಂಡಿದೆ.
ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದು ಇನ್ನೂ ನೂರಾರು ಸಂಖ್ಯೆಯಲ್ಲಿ ಸಿಬ್ಬಂದಿ ವರ್ಗಾವಣೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿ ಪಟ್ಟಿಯಲ್ಲಿ ಸಿಸಿಬಿ, ಸೆನ್ ಸೇರಿದಂತೆ ಕಮಿಷನರೇಟ್ ವ್ಯಾಪ್ತಿಗೆ ಒಳಪಡುವ ಠಾಣೆಗಳ ಹಲವು ಪೊಲೀಸರು ಕೂಡಾ ಸೇರಿದ್ದಾರೆ.
ಇದನ್ನೂ ಓದಿ: Job alert: ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
