3
Mangaluru: ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾವೂರು ಹಾಗೂ ಬಂದರು ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಎರಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿಗಳನ್ನು ಮನೀಶ್ (28) ಹಾಗೂ ಟಿ.ಟಿ. ರೋಡ್ ನಿವಾಸಿ ಸವಿನ್‌ರಾಜ್ (18) ಎಂದು ಗುರುತಿಸಲಾಗಿದೆ. ಬೊಂದೇಲ್ ಕೃಷ್ಣನಗರ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇರೆಗೆ ಈ ಇಬ್ಬರನ್ನು ಬಂಧಿಸಿದ್ದಾರೆ.
