3
Mangaluru: ಐದನೇ ಮಹಡಿಯಿಂದ ಬಿದ್ದು 13 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರು (Mangaluru) ಮೇರಿಹಿಲ್‌ನ ಮಾತಾ ರೆಸಿಡೆನ್ಸಿ ಅಪಾರ್ಟ್ಮೆಂಟ್ ನಲ್ಲಿ (Apartment) ನಡೆದಿದೆ.
ಉದ್ಯಮಿಯಾಗಿರುವ ಇರಾ ಕಿನ್ನಿಮಜಲು ಬೀಡು ಸುದೇಶ್ ಭಂಡಾರಿ ಅವರ ಪುತ್ರ ಸಮರ್ಜಿತ್ (13) ಮೃತ ಬಾಲಕ. ಈತ ಮೇರಿಹಿಲ್ನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್‌ನ 6ನೇ ತರಗತಿ ವಿದ್ಯಾರ್ಥಿ. ಶನಿವಾರ ಬೆಳ್ಳಂಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ.
5ನೇ ಮಹಡಿಯಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
