Home » Mangaluru: ಮಂಗಳೂರು: ಕೋಸ್ಟ್ ಗಾರ್ಡ್ ಅಧಿಕಾರಿಯ ಪುತ್ರ ನಾಪತ್ತೆ : ಅಪಹರಣದ ಶಂಕೆ ದೂರು ದಾಖಲು !

Mangaluru: ಮಂಗಳೂರು: ಕೋಸ್ಟ್ ಗಾರ್ಡ್ ಅಧಿಕಾರಿಯ ಪುತ್ರ ನಾಪತ್ತೆ : ಅಪಹರಣದ ಶಂಕೆ ದೂರು ದಾಖಲು !

by ಕಾವ್ಯ ವಾಣಿ
0 comments

Mangaluru: ಪಣಂಬೂರು (Mangaluru) ಕೋಸ್ಟ್ ಗಾರ್ಡ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೀವನ್ ಕುಮಾರ್ ಎಂಬವರ ಪುತ್ರ ಹಿತೇನ್ ಬದ್ರ (17) ಎಂಬವರು ಮಾ. 12ರಂದು ಕುಂಜತ್ತಬೈಲಿನಲ್ಲಿರುವ ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ.

ಬೆಳಗ್ಗೆ 10ಕ್ಕೆ ಮನೆಯಿಂದ ಹೋಗಿದ್ದು, ತನ್ನ ಮೊಬೈಲ್ ಫೋನ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾರೆ. ಆತನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿಕೊಂಡು ಹೋಗಿರುವ ಸಾಧ್ಯತೆಯಿದೆ ಎಂದು ತಂದೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಯುವಕನ ಬಗ್ಗೆ ಮಾಹಿತಿ ಇದ್ದಲ್ಲಿ ಕಾವೂರು ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

You may also like