Home » Mangaluru: ಮಂಗಳೂರು: ಗುಂಪು ಹತ್ಯೆ ಪ್ರಕರಣ: ಇನ್‌ಸ್ಪೆಕ್ಟರ್ ಶಿವಕುಮಾ‌ರ್ ಸಹಿತ ಮೂವರು ಪೊಲೀಸರು ಅಮಾನತು!

Mangaluru: ಮಂಗಳೂರು: ಗುಂಪು ಹತ್ಯೆ ಪ್ರಕರಣ: ಇನ್‌ಸ್ಪೆಕ್ಟರ್ ಶಿವಕುಮಾ‌ರ್ ಸಹಿತ ಮೂವರು ಪೊಲೀಸರು ಅಮಾನತು!

0 comments

Mangaluru: ಮಂಗಳೂರು (Mangaluru) ಹೊರವಲಯದ ಕುಡುಪು ಎಂಬಲ್ಲಿ ರವಿವಾರ ಎ.27ರಂದು ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾ‌ರ್ ಕೆ ಆರ್ ಸಹಿತ ಮೂವರನ್ನು ಅಮಾನತುಗೊಳಿಸಲಾಗಿದೆ.

ಎ.27 ರಂದು ಕುಡುಪುವಿನ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಸಮಯ ಓರ್ವ ಅಪರಿಚಿತ ವ್ಯಕ್ತಿಗೆ, ಆಟಗಾರರು ಮತ್ತು ಅಲ್ಲಿ ನರೆದಿದ್ದ ಪ್ರೇಕ್ಷಕರು ಗುಂಪು ಹಲ್ಲೆ ನಡೆಸುತ್ತಿದ್ದ ಕುರಿತು ದೀಪಕ್ ಎಂಬುವರು ಪೊಲೀಸರಿಗೆ ಪೋನ್ ಕರೆ ಮಾಡಿ ತಿಳಿಸಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟ‌ರ್, ಸಿಬ್ಬಂದಿಗಳಿಗೆ ಮಾಹಿತಿ ಬಂದಿತ್ತು. ಘಟನೆಯ ಬಗ್ಗೆ ಎಲ್ಲಾ ಮಾಹಿತಿ ಇದ್ದರೂ ಗುಂಪು ಹತ್ಯೆಯ ಬಗ್ಗೆ ಮೇಲಾಧಿಕಾರಿಗಳಿಗೆ ತಿಳಿಸಿಲ್ಲ ಎನ್ನಲಾಗಿದೆ. ಆ ಬಳಿಕ ಎಚ್ಚೆತ್ತುಕೊಂಡ ಪೊಲೀಸರು 20 ಮಂದಿ ಆರೋಪಿಗಳನ್ನು ಬಂಧಿಸಿದ್ದರು.

ಇದೀಗ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್‌ ಇನ್ಸೆಕ್ಟರ್ ಶಿವಕುಮಾರ್ ಕೆ ಆರ್, ಹೆಡ್‌ಕಾನ್‌ಸ್ಟೇಬಲ್ ಚಂದ್ರ ಪಿ. ಮತ್ತು ಪೊಲೀಸ್‌ ಕಾನ್‌ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತುಗೊಳಿಸಲಾಗಿದೆ.

You may also like